ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆರೆಮಿಯ
1. {ಫಿಲಿಷ್ಟಿಯದ ವಿಷಯವಾದ ದೈವೋಕ್ತಿ} [PS] ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. [PE][PS]
2. ಯೆಹೋವನು ಇಂತೆನ್ನುತ್ತಾನೆ, [QBR] “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, [QBR] ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. [QBR] ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. [QBR]
3. ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, [QBR] ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು. [QBR]
4. ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; [QBR] ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು. [PE][PS]
5. “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
6. ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
7. ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.” [PE]

ಟಿಪ್ಪಣಿಗಳು

No Verse Added

ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 52
ಯೆರೆಮಿಯ 47:44
ಫಿಲಿಷ್ಟಿಯದ ವಿಷಯವಾದ ದೈವೋಕ್ತಿ 1 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. 2 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. 3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು. 4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು. 5 “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ? 6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು! 7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 52
Common Bible Languages
West Indian Languages
×

Alert

×

kannada Letters Keypad References