1. {#1ಮೋವಾಬಿನ ವಿಷಯವಾದ ದೈವೋಕ್ತಿ } [PS]ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, [PE][QS]“ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, [QE][QS]ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ. [QE]
2. [QS]ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, [QE][QS]‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. [QE][QS]ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು. [QE]
3. [QS]‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ! [QE]
4. [QS]ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ. [QE]
5. [QS]ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ. [QE]
6. [QS]ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ. [QE]
7. [QS]ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; [QE][QS]ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. [QE]
8. [QS]ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; [QE][QS]ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು. [QE]
9. [QS]ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು. [QE]
10. [QS]ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; [QE][QS]ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ. [QE]
11. [QS]ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; [QE][QS]ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.” [QE]
12. [QS]ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, [QE][QS]ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ. [QE]
13.
14. [PS]ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು. [PE][QS]“ ‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ? [QE]
15. [QS]ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. [QE][QS]ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. [QE]
16. [QS]ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು. [QE]
17. [QS]ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. [QE][QS]‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ. [QE]
18. [QS]ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! [QE][QS]ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ. [QE]
19. [QS]ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; [QE][QS]ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ. [QE]
20. [QS]ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; [QE][QS]ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ. [QE]
21. [QS]ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್, [QE]
22. [QS]ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್, [QE]
23. [QS]ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್, [QE]
24. [QS]ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ. [QE]
25. [QS]ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ. [QE]
26. [PS]“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
27. ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ? [PE]
28. [QS]ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ; [QE]
29. [QS]ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.” [QE]
30.
31. [PS]ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ. [PE][QS]ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; [QE][QS]ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು. [QE]
32. [QS]ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; [QE][QS]ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; [QE][QS]ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ. [QE]
33. [QS]ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; [QE][QS]ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ. [QE]
34. [QS]ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, [QE][QS]ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ. [QE]
35. [QS]ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.” [QE]
36. [QS]ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; [QE][QS]ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ. [QE]
37. [QS]ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು. [QE]
38. [QS]ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; [QE][QS]“ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ. [QE]
39. [QS]ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ. [QE]
40.
41. [PS]ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. [PE][QS]ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. [QE]
42. [QS]ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.” [QE]
43. [QS]ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ; [QE]
44. [QS]ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; [QE][QS]ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.” [QE]
45. [QS]ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; [QE][QS]ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. [QE]
46. [QS]“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ[* ಕೆಮೋಷಿನ ಕೆಮೋಷ್ ಮೋವಾಬ್ಯರ ದೇವರು, ಮತ್ತು ಮೋವಾಬ್ಯ ಜನರನ್ನು ಸಾಮಾನ್ಯವಾಗಿ ಕೆಮೋಷಿನ ಜನರು ಎಂದು ಕರೆಯಲಾಗುತ್ತಿತ್ತು. ] ಭಕ್ತರು ನಾಶವಾದರು; [QE][QS]ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು. [QE]
47. [QS]ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. [QE][QS]ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ. [QE]