1. {ಮೋವಾಬಿನ ವಿಷಯವಾದ ದೈವೋಕ್ತಿ} PS ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
“ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ. |
2. ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ,
‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು. |
5. ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
|
7. ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ;
ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. |
8. ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು;
ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು. |
10. ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ;
ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ. |
11. ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ;
ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.” |
12. ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು,
ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ. PEPS |
15. ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ.
ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. |
17. ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ.
‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ. |
18. ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ!
ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ. |
19. ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ;
ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ. |
20. ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ;
ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ. |
26. “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
|
27. ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
|
28. ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
|
29. ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.” PEPS
|
30. ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.
|
31. ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು;
ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು. |
32. ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು;
ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ. |
33. ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ;
ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ. |
34. ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ,
ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ. |
35. ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
|
36. ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ;
ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ. |
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ;
“ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ. |
39. ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ. PEPS
|
40. ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.
|
41. ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
|
44. ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು;
ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.” |
45. ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ;
ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. |
46. “ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ * ಕೆಮೋಷಿನ ಕೆಮೋಷ್ ಮೋವಾಬ್ಯರ ದೇವರು, ಮತ್ತು ಮೋವಾಬ್ಯ ಜನರನ್ನು ಸಾಮಾನ್ಯವಾಗಿ ಕೆಮೋಷಿನ ಜನರು ಎಂದು ಕರೆಯಲಾಗುತ್ತಿತ್ತು. ಭಕ್ತರು ನಾಶವಾದರು;
ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು. |
47. ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”.
ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ. PE |