1. {ಅಮ್ಮೋನಿನ ವಿಷಯವಾದ ದೈವೋಕ್ತಿ} [PS] ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, [QBR] “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? [QBR] ಮಲ್ಕಾಮ್ [* ಮಲ್ಕಾಮ್ ಮಲ್ಕಾಮ್ ಅನ್ನು ಆರಾಧಿಸುವವರು ಅಥವಾ ಅವರ ಅರಸನು.] ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? [QBR] ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? [QBR]
2. ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, [QBR] ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; [QBR] ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; [QBR] ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.” [QBR]
3. “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, [QBR] ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; [QBR] ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. [QBR]
4. ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, [QBR] ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ? [QBR]
5. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, [QBR] ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, [QBR] ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. [QBR]
6. ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7. {ಎದೋಮಿನ ವಿಷಯವಾದ ದೈವೋಕ್ತಿ} [PS] ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, [QBR] “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? [QBR] ಅವರ ಜ್ಞಾನವು ಮಾಯವಾಯಿತೋ? [QBR]
8. ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; [QBR] ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. [QBR]
9. ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; [QBR] ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು. [QBR]
10. ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; [QBR] ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು. [QBR]
11. ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ. [QBR]
12. ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, [QBR] ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ. [QBR]
13. ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. [QBR] ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.” [QBR]
14. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, [QBR] “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ. [QBR]
15. ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. [QBR]
16. ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, [QBR] ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; [QBR] ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, [QBR] ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.” [QBR]
17. ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; [QBR] ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು. [QBR]
18. ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ [QBR] ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ. [QBR]
19. ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ [QBR] ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; [QBR] ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; [QBR] ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? [QBR] ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು? [QBR]
20. ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, [QBR] ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; [QBR] ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. [QBR]
21. ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು! [QBR]
22. ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; [QBR] ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
23. {ದಮಸ್ಕದ ವಿಷಯವಾದ ದೈವೋಕ್ತಿ} [PS] ದಮಸ್ಕವನ್ನು ಕುರಿತದ್ದು, [PE][PS] “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು. [QBR]
24. ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ. [QBR]
25. ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ! [QBR]
26. ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು. [QBR]
27. ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, [QBR] ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
28. {ಕೇದಾರಿನ ವಿಷಯವಾದ ದೈವೋಕ್ತಿ} [PS] ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. [PE][PS] “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ. [QBR]
29. “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. [QBR] ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.” [QBR]
30. ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, [QBR] ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು [QBR] ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. [QBR]
31. ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ! [QBR]
32. ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; [QBR] ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. [QBR]
33. ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; [QBR] ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
34. {ಏಲಾಮಿನ ವಿಷಯವಾದ ದೈವೋಕ್ತಿ} [PS] ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು. [QBR]
35. “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು. [QBR]
36. ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, [QBR] ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ. [QBR]
37. ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; [QBR] ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು; [QBR]
38. ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು. [QBR]
39. ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.” [PE]