1. {#1ಅಮ್ಮೋನಿನ ವಿಷಯವಾದ ದೈವೋಕ್ತಿ } [QS]ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, [QE][QS]“ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? [QE][QS]ಮಲ್ಕಾಮ್[* ಮಲ್ಕಾಮ್ ಮಲ್ಕಾಮ್ ಅನ್ನು ಆರಾಧಿಸುವವರು ಅಥವಾ ಅವರ ಅರಸನು. ] ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? [QE][QS]ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? [QE]
2. [QS]ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, [QE][QS]ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; [QE][QS]ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; [QE][QS]ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.” [QE]
3. [QS]“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, [QE][QS]ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; [QE][QS]ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. [QE]
4. [QS]‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, [QE][QS]‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ? [QE]
5. [QS]ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, [QE][QS]ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, [QE][QS]ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. [QE]
6. [QS]ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.” [QE]
7. {#1ಎದೋಮಿನ ವಿಷಯವಾದ ದೈವೋಕ್ತಿ } [QS]ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, [QE][QS]“ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? [QE][QS]ಅವರ ಜ್ಞಾನವು ಮಾಯವಾಯಿತೋ? [QE]
8. [QS]ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; [QE][QS]ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. [QE]
9. [QS]ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; [QE][QS]ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು. [QE]
10. [QS]ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; [QE][QS]ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು. [QE]
11. [QS]ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ. [QE]
12. [QS]ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, [QE][QS]ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ. [QE]
13. [QS]ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. [QE][QS]ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.” [QE]
14. [QS]ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, [QE][QS]“ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ. [QE]
15. [QS]ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. [QE]
16. [QS]ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, [QE][QS]ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; [QE][QS]ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, [QE][QS]ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.” [QE]
17. [QS]ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; [QE][QS]ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು. [QE]
18. [QS]ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ [QE][QS]ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ. [QE]
19. [QS]ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ [QE][QS]ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; [QE][QS]ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; [QE][QS]ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? [QE][QS]ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು? [QE]
20. [QS]ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, [QE][QS]ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; [QE][QS]ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. [QE]
21. [QS]ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು! [QE]
22. [QS]ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; [QE][QS]ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. [QE]
23. {#1ದಮಸ್ಕದ ವಿಷಯವಾದ ದೈವೋಕ್ತಿ } [QS]ದಮಸ್ಕವನ್ನು ಕುರಿತದ್ದು, [QE]
24. [PS]“ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು. [PE][QS]ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ. [QE]
25. [QS]ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ! [QE]
26. [QS]ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು. [QE]
27. [QS]ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, [QE][QS]ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. [QE]
28. {#1ಕೇದಾರಿನ ವಿಷಯವಾದ ದೈವೋಕ್ತಿ } [QS]ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. [QE]
29. [PS]“ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ. [PE][QS]“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. [QE][QS]ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.” [QE]
30. [QS]ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, [QE][QS]ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು [QE][QS]ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. [QE]
31. [QS]ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ! [QE]
32. [QS]ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; [QE][QS]ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. [QE]
33. [QS]ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; [QE][QS]ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.” [QE]
34. {#1ಏಲಾಮಿನ ವಿಷಯವಾದ ದೈವೋಕ್ತಿ } [QS]ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು. [QE]
35. [QS]“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು. [QE]
36. [QS]ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, [QE][QS]ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ. [QE]
37. [QS]ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; [QE][QS]ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು; [QE]
38. [QS]ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು. [QE]
39. [QS]ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.” [QE]