1. {ಅಮ್ಮೋನಿನ ವಿಷಯವಾದ ದೈವೋಕ್ತಿ} PS ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ,
“ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ * ಮಲ್ಕಾಮ್ ಮಲ್ಕಾಮ್ ಅನ್ನು ಆರಾಧಿಸುವವರು ಅಥವಾ ಅವರ ಅರಸನು. ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? |
2. ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು,
ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.” |
3. “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು,
ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. |
4. ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ,
‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ? |
5. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ,
ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. |
7. {ಎದೋಮಿನ ವಿಷಯವಾದ ದೈವೋಕ್ತಿ} PS ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ? |
8. ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ;
ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. |
9. ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ;
ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು. |
10. ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು;
ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು. |
12. ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ,
ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ. |
13. ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ.
ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.” |
14. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,
“ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ. |
16. ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ,
ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.” |
17. ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು;
ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು. |
18. ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ
ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ. |
19. ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ
ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು? |
20. ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. |
22. ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು;
ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. |
23. {ದಮಸ್ಕದ ವಿಷಯವಾದ ದೈವೋಕ್ತಿ} PS ದಮಸ್ಕವನ್ನು ಕುರಿತದ್ದು, PEPS “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
|
24. ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
|
26. ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
|
27. ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು,
ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. |
28. {ಕೇದಾರಿನ ವಿಷಯವಾದ ದೈವೋಕ್ತಿ} PS ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. PEPS “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
|
29. “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು.
ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.” |
30. ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ,
ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. |
31. ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
|
32. ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು;
ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. |
33. ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು;
ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.” |
34. {ಏಲಾಮಿನ ವಿಷಯವಾದ ದೈವೋಕ್ತಿ} PS ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
|
36. ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ,
ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ. |
37. ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು;
ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು; |