1. {#1ಯೆಹೂದದವರ ಪಾಪಗಳು } [QS]ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; [QE][QS]ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? [QE][QS]ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು. [QE]
2. [QS]ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ. [QE]
3. [QS]ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. [QE][QS]ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ. [QE]
4. [QS]ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; [QE]
5. [QS]ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. [QE][QS]ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ. [QE]
6. [QS]ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, [QE][QS]ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ. [QE]
7. [QS]ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. [QE][QS]ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು. [QE]
8. [QS]ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು. [QE]
9. [QS]ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ. [QE]
10. [QS]“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ[* ದ್ರಾಕ್ಷಿ ತೋಟದ ಗೋಡೆಗಳ ] ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. [QE][QS]ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. [QE]
11. [QS]ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ. [QE]
12. [QS]ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು; [QE]
13. [QS]ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’ ” ಅಂದುಕೊಂಡಿದ್ದಾರೆ. [QE]
14. [QS]ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, [QE][QS]“ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು. [QE]
15. [QS]ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. [QE][QS]ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. [QE]
16. [QS]ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ. [QE]
17. [QS]ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, [QE][QS]ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. [QE][QS]ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು. [QE]
18. [QS]ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ. [QE]
19.
20. [PS]“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು[† ನಿನ್ನ ಜನರು ಅಥವಾ ನೀವು. ] ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು. [PE]{#1ದೇವಜನರಿಗೆ ಎಚ್ಚರಿಕೆ } [QS]ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ, [QE]
21. [QS]ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ, [QE]
22. [QS]ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. [QE][QS]ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು. [QE]
23. [QS]ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ. [QE]
24. [QS]“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, [QE][QS]ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ. [QE]
25. [QS]ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ. [QE]
26. [QS]ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; [QE][QS]ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ. [QE]
27. [QS]ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; [QE][QS]ಇದರಿಂದ ಧನವಂತರಾಗಿದ್ದಾರೆ. [QE]
28. [QS]ಕೊಬ್ಬಿ ಡಾಂಭಿಕರಾದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. [QE][QS]ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು. [QE]
29. [QS]ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ. [QE]
30. [QS]ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ; [QE]
31. [QS]ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. [QE][QS]ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ? [QE]