1. {ಯೆಹೂದದವರ ಪಾಪಗಳು} PS ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ;
ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು. |
3. ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ.
ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ. |
4. ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
|
5. ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು.
ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ. |
6. ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು,
ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ. |
7. ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ.
ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು. |
8. ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
|
9. ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
|
10. “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ * ದ್ರಾಕ್ಷಿ ತೋಟದ ಗೋಡೆಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ.
ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. |
12. ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
|
14. ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು,
“ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು. |
15. ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು.
ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. |
17. ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ,
ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು. |
18. ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ. PEPS
|
19. “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು † ನಿನ್ನ ಜನರು ಅಥವಾ ನೀವು. ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
|
22. ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ.
ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು. |
24. “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ,
ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ. |
26. ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ;
ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ. |
28. ಕೊಬ್ಬಿ ಡಾಂಭಿಕರಾದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ.
ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು. |
29. ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
|
31. ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ.
ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ? PE |