1. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ * ಲೇಬ್ ಕಾಮೈ ಕಸ್ಧೀಯರ ಅಥವಾ ಕಲ್ದೀಯರ ದೇಶದ ರಹಸ್ಯವಾದ ಹೆಸರು. ದೇಶದವರ ಮೇಲೂ ನಾಶನದ ಗಾಳಿಯನ್ನು † ನಾಶನದ ಗಾಳಿಯನ್ನು ನಾಶನದ ಆತ್ಮವನ್ನು. ಬೀಸಮಾಡುವೆನು.
|
2. ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು.
ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ. |
3. ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ.
ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ. |
5. ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ,
ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. |
6. ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ.
ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು. |
7. ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು;
ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. |
8. ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ;
ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು. |
9. ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ;
ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ. |
10. ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ;
ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ! |
11. ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ,
ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ ‡ ಗುರಾಣಿಗಳನ್ನು ಸನ್ನದ್ಧ ಮಾಡಿರಿ ಗುರಾಣಿಗಳನ್ನು ತೆಗೆದುಕೊಳ್ಳಿರಿ ! |
12. ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ,
ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ. |
13. ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ,
ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು. |
14. ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು,
‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು. |
15. {ಯೆಹೋವನಿಗೆ ಸ್ತುತಿಗೀತೆ} PS ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ
ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ. |
16. ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ;
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. |
17. ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ;
ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. |
19. ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು;
ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು. |
21. ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ;
ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ; |
22. ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ;
ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು; |
23. ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ;
ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು; |
24. ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ,
ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’ ” ಎಂದು ಯೆಹೋವನು ಅನ್ನುತ್ತಾನೆ. |
25. ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ;
ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು. |
26. ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು,
ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ. |
27. “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ,
ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ. |
28. ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು,
ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ. |
29. ದೇಶವೆಲ್ಲಾ ನೊಂದು ನಡುಗುತ್ತದೆ;
ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ. |
30. ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ;
ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ. |
31. ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ,
ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ, |
32. ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
|
33. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
“ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು. |
34. ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ,
ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ. |
35. ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ;
‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.” |
36. {ಬಾಬಿಲೋನಿಗೆ ಪ್ರತಿಕಾರ} PS ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು;
ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. |
37. ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು;
ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು. |
39. ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು,
ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ. |
41. ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
|
44. ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ,
ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು. |
45. {ಸೆರೆವಾಸಿಗಳಿಗೆ ಸಂದೇಶ} PS ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
|
46. ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ;
ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು. |
47. ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ.
ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು. |
48. ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು;
ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.” |
49. “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ,
ಹಾಗೆಯೇ ಬಾಬೆಲೂ ಹತವಾಗುವುದು. |
50. ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ;
ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ. |
51. ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು,
‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ? |
52. ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ;
ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. |
53. ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ,
ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.” |
54. {ಬಾಬೆಲಿನ ಸಂಪೂರ್ಣ ವಿನಾಶ} PS “ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
|
55. ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;
ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ; |
56. ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ,
ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ. |
57. ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು,
ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.” |
58. ಸೇನಾಧೀಶ್ವರನಾದ ಯೆಹೋವನು,
“ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ. |
59. {ಯೆರೆಮೀಯನ ಸಂದೇಶವನ್ನು ಬಾಬಿಲೋನಿಗೆ ಕಳುಹಿಸಿದ್ದು} PS ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ
ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.) PEPS |
60. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
|
62. ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
|
64. ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು. PE
|