1. {ಯೆರೂಸಲೇಮಿನ ಜನರಿಗೆ ಎಚ್ಚರಿಕೆ} PS “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
|
3. ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
|
4. ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
|
6. ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ.
ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ. |
7. ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ.
ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. |
8. ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
|
9. ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
|
10. {ದಂಗೆಕೋರ ಯೆಹೂದ} PS ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. * ಅವರ ಕಿವಿ ಮುಚ್ಚಲ್ಪಟ್ಟಿವೆ. ಅವರ ಕಿವಿಗಳು ಸುನ್ನತಿ ಇಲ್ಲದವು,
ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ. |
11. ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು.
ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು. |
12. ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
|
13. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
|
15. ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.
ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ. |
16. {ಯೆಹೋವನ ಮಾರ್ಗವನ್ನು ತಿರಸ್ಕರಿಸಿದ ಯೆಹೂದ} PS ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು.
ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು. |
17. ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
|
19. ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
|
20. ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ?
ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ. |
21. ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು.
ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ. |
22. {ಉತ್ತರ ದಿಕ್ಕಿನಿಂದ ಆಕ್ರಮಣ} PS “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
|
23. ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ.
ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ. |
24. ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
|
26. ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು.
ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. |
27. ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
|
28. ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು.
ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ. |
29. ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ.
ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ. |