ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆರೆಮಿಯ
1. [QS]ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! [QE][QS]ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ! [QE]
2. [QS]ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! [QE][QS]ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ. [QE]
3. {#1ಯೆರೆಮೀಯನಿಗೆ ಯೆಹೋವನ ಉತ್ತರ } [QS]ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. [QE][QS]ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. [QE]
4. [QS]ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. [QE][QS]ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು. [QE]
5. [QS]ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. [QE][QS]ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. [QE]
6. [QS]ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ. [QE]
7. [QS]ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. [QE]
8. [QS]ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; [QE][QS]ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ. [QE]
9. [QS]ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ. [QE]
10. [QS]“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ. [QE]
11. [QS]ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು [QE][QS]ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ. [QE]
12. {#1ದೇಶವು ಸುಟ್ಟು ಹೋಗುವುದಕ್ಕೆ ಕಾರಣ } [QS]ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? [QE][QS]ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? [QE]
13. [QS]ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. [QE]
14. [QS]ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು. [QE]
15. [QS]ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು. [QE]
16. [QS]ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ. [QE]
17. {#1ಯೆರೂಸಲೇಮಿನ ಶೋಕಗೀತೆ } [QS]ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ. [QE]
18. [QS]ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ. [QE]
19. [QS]‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. [QE]
20. [QS]ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. [QE][QS]ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; [QE]
21. [QS]ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ. [QE]
22. [QS]“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು. [QE]
23. {#1ಯೆಹೋವನಲ್ಲಿ ಹೆಚ್ಚಳಪಡುವುದು } [QS]ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ. [QE]
24. [QS]ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ. [QE]
25. [PS]“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
26. ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ. [PE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 52
1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ! 2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ. ಯೆರೆಮೀಯನಿಗೆ ಯೆಹೋವನ ಉತ್ತರ 3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. 4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು. 5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. 6 ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ. 7 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. 8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ. 9 ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ. 10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ. 11 ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ. ದೇಶವು ಸುಟ್ಟು ಹೋಗುವುದಕ್ಕೆ ಕಾರಣ 12 ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? 13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. 14 ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು. 15 ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು. 16 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ. ಯೆರೂಸಲೇಮಿನ ಶೋಕಗೀತೆ 17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ. 18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ. 19 ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. 20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; 21 ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ. 22 “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು. ಯೆಹೋವನಲ್ಲಿ ಹೆಚ್ಚಳಪಡುವುದು 23 ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ. 24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ. 25 “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ. 26 ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 52
×

Alert

×

Kannada Letters Keypad References