1. {ಯೋಬನ ಮತ್ತೆ ದೇವರಿಗಿಟ್ಟ ಮೊರೆ} [PS] ನನ್ನ ಜೀವವೇ ನನಗೆ ಬೇಸರವಾಗಿದೆ. [QBR] ಎದೆಬಿಚ್ಚಿ ಮೊರೆಯಿಡುವೆನು; [QBR] ಮನೋವ್ಯಥೆಯಿಂದ ನುಡಿಯುವೆನು. [QBR]
2. ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, [QBR] ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು. [QBR]
3. ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ [QBR] ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, [QBR] ಬಾಧಿಸುವುದು ನಿನಗೆ ಸಂತೋಷವೋ? [QBR]
4. ನೀನು ಮಾಂಸದ ಕಣ್ಣುಳ್ಳವನೋ? [QBR] ಮನುಷ್ಯರು ನೋಡುವಂತೆ ನೋಡುತ್ತೀಯಾ? [QBR]
5. ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ? [QBR] ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ, [QBR]
6. ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ, [QBR] ನನ್ನ ಪಾಪವನ್ನು ವಿಚಾರಿಸುವುದೇಕೆ? [QBR]
7. ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; [QBR] ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ? [QBR]
8. ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, [QBR] ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ? [QBR]
9. ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. [QBR] ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ? [QBR]
10. ನೀನು ನನ್ನನ್ನು ಹಾಲಿನಂತೆ ಹೊಯ್ದು, [QBR] ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ. [QBR]
11. ನನ್ನನ್ನು ಎಲುಬು ನರಗಳಿಂದ ಹೆಣೆದು [QBR] ಮಾಂಸಚರ್ಮಗಳಿಂದ ಹೊದಿಸಿದಿ. [QBR]
12. ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; [QBR] ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ. [QBR]
13. ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, [QBR] ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. [QBR]
14. ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; [QBR] ನನ್ನ ದೋಷವನ್ನು ಕ್ಷಮಿಸುವುದಿಲ್ಲ. [QBR]
15. ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, [QBR] ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು. [QBR]
16. ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; [QBR] ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ. [QBR]
17. ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ [QBR] ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. [QBR] ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ. [QBR]
18. ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? [QBR] ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು. [QBR]
19. ಆಗ ನಾನು ಇರುತ್ತಿರಲಿಲ್ಲ; [QBR] ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು. [QBR]
20. ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, [QBR] ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು. [QBR]
21. ನಾನು ಅಂಧಕಾರದಿಂದಲೂ, [QBR] ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. [QBR] ಆ ದೇಶದಿಂದ ತಿರುಗಿ ಬರಲಾರೆನು. [QBR]
22. ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, [QBR] ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, [QBR] ಅದರ ಬೆಳಕು ರಾತ್ರಿಯ ಬೆಳಕಿನಂತೆ.” [PE]