1. {#1ಯೋಬನ ನಾಲ್ಕನೆಯ ಸಂಭಾಷಣೆ: ಚೋಫರನಿಗೆ ನೀಡಿದ ಪ್ರತ್ಯುತ್ತರ }
2. [PS]ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು, [PE][QS]“ಹೌದು, ನೀವೇ ಮನುಷ್ಯರು; [QE][QS]ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ. [QE]
3. [QS]ನಿಮ್ಮ ಹಾಗೆ ನನಗೂ ಬುದ್ಧಿಯುಂಟು, [QE][QS]ನಿಮಗಿಂತ ನಾನು ಕಡೆಯಲ್ಲ. [QE][QS]ಇಂಥವು ಯಾರಿಗೆ ತಾನೇ ಗೊತ್ತಿಲ್ಲ. [QE]
4. [QS]ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! [QE][QS]ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, [QE][QS]ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ. [QE]
5. [QS]ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; [QE][QS]ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ. [QE]
6. [QS]ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, [QE][QS]ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, [QE][QS]ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು. [QE]
7. [QS]ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; [QE][QS]ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; [QE]
8. [QS]ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; [QE][QS]ಸಮುದ್ರದ ಮೀನುಗಳು ನಿನಗೆ ಹೇಳುವವು. [QE]
9. [QS]ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ [QE][QS]ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ? [QE]
10. [QS]ಪ್ರತಿ ಪ್ರಾಣಿಯ ಪ್ರಾಣವು, [QE][QS]ಸಮಸ್ತ ಮನುಷ್ಯರ ಆತ್ಮಗಳೂ [QE][QS]ಯೆಹೋವನ ಕೈಯಲ್ಲಿರುವವು. [QE]
11. [QS]ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ [QE][QS]ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. [QE]
12. [QS]ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? [QE][QS]ದಿರ್ಘಾಷ್ಯರಲ್ಲಿ ವಿವೇಕವಿದೆ. [QE]
13. [QS]ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, [QE][QS]ಆಲೋಚನೆಯೂ, ವಿವೇಕವೂ ಆತನವೇ. [QE]
14. [QS]ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, [QE][QS]ಯಾರೂ ಬಿಡಿಸದಂತೆ ಸೆರೆಹಾಕುವನು. [QE]
15. [QS]ನೋಡಿರಿ, ಆತನು ನೀರುಗಳನ್ನು ತಡೆದರೆ ಬೆಳೆಗಳು, ಭೂಮಿ ಒಣಗಿಹೋಗುತ್ತದೆ; [QE][QS]ನೀರನ್ನು ಬಿಟ್ಟರೆ ಭೂಮಿಯನ್ನು ಆವರಿಸುತ್ತದೆ. [QE]
16. [QS]ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; [QE][QS]ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು. [QE]
17. [QS]ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, [QE][QS]ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು. [QE]
18. [QS]ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು [QE][QS]ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು. [QE]
19. [QS]ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, [QE][QS]ಪ್ರಧಾನರನ್ನು ದೊಬ್ಬಿಬಿಡುವನು. [QE]
20. [QS]ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, [QE][QS]ಹಿರಿಯರ ವಿವೇಕವನ್ನು ತೆಗೆದುಹಾಕುವನು. [QE]
21. [QS]ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ [QE][QS]ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು. [QE]
22. [QS]ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು [QE][QS]ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು. [QE]
23. [QS]ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, [QE][QS]ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು. [QE]
24. [QS]ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, [QE][QS]ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು. [QE]
25. [QS]ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; [QE][QS]ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.” [QE]