1. {ಯೋಬನ ಪ್ರತ್ಯುತ್ತರದ ಮುಂದುವರಿಕೆ} [PS] ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, [QBR] ಕಿವಿಯು ಕೇಳಿ ಗ್ರಹಿಸಿದೆ. [QBR]
2. ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. [QBR] ನಿಮಗಿಂತ ನಾನು ಕಡೆಯಲ್ಲ. [QBR]
3. ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, [QBR] ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ. [QBR]
4. ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, [QBR] ನೀವೆಲ್ಲರೂ ವ್ಯರ್ಥ ವೈದ್ಯರೇ. [QBR]
5. ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! [QBR] ಮೌನವೇ ನಿಮಗೆ ಜ್ಞಾನವು. [QBR]
6. ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, [QBR] ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ. [QBR]
7. ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? [QBR] ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? [QBR]
8. ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? [QBR] ದೇವರಿಗಾಗಿ ವಾದಿಸುವಿರಾ? [QBR]
9. ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? [QBR] ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ? [QBR]
10. ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು. [QBR]
11. ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? [QBR] ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ? [QBR]
12. ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; [QBR] ನಿಮ್ಮ ಕೋಟೆಯು ಬರೀ ಮಣ್ಣಿನದೇ. [QBR]
13. ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, [QBR] ನನಗೇನಾದರೂ ಆಗಲಿ. [QBR]
14. ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, [QBR] ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. [QBR]
15. ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, [QBR] ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು. [QBR]
16. ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, [QBR] ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ. [QBR]
17. ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ. [QBR]
18. ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; [QBR] ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ. [QBR]
19. ನನಗೆ ಪ್ರತಿವಾದಿ ಇದ್ದಾನೋ? [QBR] ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು. [QBR]
20. ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. [QBR] ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ. [QBR]
21. ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, [QBR] ನಿನ್ನ ಭಯವು ನನ್ನನ್ನು ಹೆದರಿಸದಿರಲಿ. [QBR]
22. ಆಗ ನೀನು ಕರೆದರೆ ನಾನು ಉತ್ತರಕೊಡುವೆನು, [QBR] ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು. [QBR]
23. ನನ್ನ ಪಾಪದೋಷಗಳೆಷ್ಟು? [QBR] ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು. [QBR]
24. ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? [QBR] ನನ್ನನ್ನು ಶತ್ರುವೆಂದೆಣಿಸಿರುವುದೇಕೆ? [QBR]
25. ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? [QBR] ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ? [QBR]
26. ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, [QBR] ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ. [QBR]
27. ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; [QBR] ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ. [QBR]
28. ಕೊಳೆಯುವ ಪದಾರ್ಥದಂತೆಯೂ, [QBR] ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ. [PE]