1. {ಯೋಬನು ದೇವರೊಂದಿಗೆ ಪ್ರಾರ್ಥಿಸಿದ್ದು} [PS] “ಮಾನವ ಜನ್ಮ ಪಡೆದವನು, [QBR] ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು. [QBR]
2. ಹೂವಿನ ಹಾಗೆ ಅರಳಿ ಬಾಡುವನು, [QBR] ನೆರಳಿನಂತೆ ನಿಲ್ಲದೆ ಓಡಿಹೋಗುವನು. [QBR]
3. ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, [QBR] ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ? [QBR]
4. ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ. [QBR]
5. ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; [QBR] ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; [QBR] ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. [QBR]
6. ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, [QBR] ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.
7. {ಮರಣದ ಅನಿವಾರ್ಯತೆ} [PS] ಕಡಿದ ಮರವೂ, [QBR] ತಾನು ಮೊಳೆಯುವುದನ್ನು ನಿಲ್ಲಿಸದೆ, [QBR] ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ! [QBR]
8. ನೆಲದಲ್ಲಿ ಅದರ ಬೇರು ಹಳೆಯದಾದರೂ, [QBR] ಮಣ್ಣಿನಲ್ಲಿ ಸತ್ತರೂ, [QBR]
9. ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ [QBR] ಗಿಡದ ಹಾಗೆ ಕವಲೊಡೆಯುವುದು. [QBR]
10. ಮನುಷ್ಯನಾದರೋ ಸತ್ತು ಬೋರಲುಬೀಳುವನು, [QBR] ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ. [QBR]
11. ಸರೋವರದ ನೀರು ಬತ್ತುವಂತೆ, [QBR] ನದಿಯ ನೀರು ಆವಿಯಾಗಿ ಒಣಗುವ ಹಾಗೆ, [QBR]
12. ಮನುಷ್ಯರು ಮಲಗಿಕೊಂಡು ಏಳದೇ ಇರುವರು; [QBR] ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, [QBR] ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. [QBR]
13. ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, [QBR] ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, [QBR] ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! [QBR]
14. ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? [QBR] ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, [QBR] ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು. [QBR]
15. ನೀನು ಕರೆದರೆ ಉತ್ತರಕೊಡುವೆನು, [QBR] ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು. [QBR]
16. ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, [QBR] ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ! [QBR]
17. ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, [QBR] ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ. [QBR]
18. ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, [QBR] ಬಂಡೆಯು ತನ್ನ ಸ್ಥಳದಿಂದ ಜರುಗುವುದು, [QBR]
19. ನೀರು ಕಲ್ಲುಗಳನ್ನು ಸವೆಯಿಸುವುದು, [QBR] ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. [QBR] ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. [QBR]
20. ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. [QBR] ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. [QBR]
21. ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. [QBR] ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ. [QBR]
22. ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, [QBR] ಅವನ ಆತ್ಮವು ಪ್ರಲಾಪಿಸುವುದು.” [PE]