1. {ಯೋಬನು ದೇವರೊಂದಿಗೆ ಪ್ರಾರ್ಥಿಸಿದ್ದು} PS “ಮಾನವ ಜನ್ಮ ಪಡೆದವನು,
ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು. |
5. ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ;
ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. |
6. ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು,
ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. |
7. {ಮರಣದ ಅನಿವಾರ್ಯತೆ} PS ಕಡಿದ ಮರವೂ,
ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ! |
12. ಮನುಷ್ಯರು ಮಲಗಿಕೊಂಡು ಏಳದೇ ಇರುವರು;
ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. |
13. ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ,
ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! |
14. ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ?
ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು. |
19. ನೀರು ಕಲ್ಲುಗಳನ್ನು ಸವೆಯಿಸುವುದು,
ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. |
20. ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು.
ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. |
21. ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ.
ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ. |