1. {#1ಯೋಬನು ದೇವರೊಂದಿಗೆ ಪ್ರಾರ್ಥಿಸಿದ್ದು } [QS]“ಮಾನವ ಜನ್ಮ ಪಡೆದವನು, [QE][QS]ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು. [QE]
2. [QS]ಹೂವಿನ ಹಾಗೆ ಅರಳಿ ಬಾಡುವನು, [QE][QS]ನೆರಳಿನಂತೆ ನಿಲ್ಲದೆ ಓಡಿಹೋಗುವನು. [QE]
3. [QS]ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, [QE][QS]ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ? [QE]
4. [QS]ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ. [QE]
5. [QS]ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; [QE][QS]ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; [QE][QS]ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. [QE]
6. [QS]ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, [QE][QS]ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. [QE]
7. {#1ಮರಣದ ಅನಿವಾರ್ಯತೆ } [QS]ಕಡಿದ ಮರವೂ, [QE][QS]ತಾನು ಮೊಳೆಯುವುದನ್ನು ನಿಲ್ಲಿಸದೆ, [QE][QS]ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ! [QE]
8. [QS]ನೆಲದಲ್ಲಿ ಅದರ ಬೇರು ಹಳೆಯದಾದರೂ, [QE][QS]ಮಣ್ಣಿನಲ್ಲಿ ಸತ್ತರೂ, [QE]
9. [QS]ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ [QE][QS]ಗಿಡದ ಹಾಗೆ ಕವಲೊಡೆಯುವುದು. [QE]
10. [QS]ಮನುಷ್ಯನಾದರೋ ಸತ್ತು ಬೋರಲುಬೀಳುವನು, [QE][QS]ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ. [QE]
11. [QS]ಸರೋವರದ ನೀರು ಬತ್ತುವಂತೆ, [QE][QS]ನದಿಯ ನೀರು ಆವಿಯಾಗಿ ಒಣಗುವ ಹಾಗೆ, [QE]
12. [QS]ಮನುಷ್ಯರು ಮಲಗಿಕೊಂಡು ಏಳದೇ ಇರುವರು; [QE][QS]ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, [QE][QS]ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. [QE]
13. [QS]ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, [QE][QS]ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, [QE][QS]ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! [QE]
14. [QS]ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? [QE][QS]ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, [QE][QS]ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು. [QE]
15. [QS]ನೀನು ಕರೆದರೆ ಉತ್ತರಕೊಡುವೆನು, [QE][QS]ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು. [QE]
16. [QS]ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, [QE][QS]ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ! [QE]
17. [QS]ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, [QE][QS]ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ. [QE]
18. [QS]ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, [QE][QS]ಬಂಡೆಯು ತನ್ನ ಸ್ಥಳದಿಂದ ಜರುಗುವುದು, [QE]
19. [QS]ನೀರು ಕಲ್ಲುಗಳನ್ನು ಸವೆಯಿಸುವುದು, [QE][QS]ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. [QE][QS]ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. [QE]
20. [QS]ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. [QE][QS]ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. [QE]
21. [QS]ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. [QE][QS]ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ. [QE]
22. [QS]ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, [QE][QS]ಅವನ ಆತ್ಮವು ಪ್ರಲಾಪಿಸುವುದು.” [QE]