1. {ಎಲೀಫಜನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ} [PS] ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, [QBR]
2. “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, [QBR] ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ? [QBR]
3. ಪ್ರಯೋಜನವಿಲ್ಲದ ನುಡಿಯಿಂದಲೂ, [QBR] ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ? [QBR]
4. ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, [QBR] ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ. [QBR]
5. ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. [QBR] ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ. [QBR]
6. ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, [QBR] ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ. [QBR]
7. ನೀನು ಆದಿಪುರುಷನೋ? [QBR] ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ? [QBR]
8. ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? [QBR] ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ? [QBR]
9. ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? [QBR] ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? [QBR]
10. ತಲೆನರೆತು ನಿನ್ನ ತಂದೆಗಿಂತ [QBR] ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. [QBR]
11. ದೇವರ ಆದರಣೆಗಳೂ, [QBR] ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ? [QBR]
12. ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? [QBR] ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ? [QBR]
13. ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ [QBR] ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! [QBR]
14. ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? [QBR] ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ? [QBR]
15. ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, [QBR] ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. [QBR]
16. ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, [QBR] ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! [QBR]
17. ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, [QBR] ಕಂಡದ್ದನ್ನೇ ವಿವರಿಸುವೆನು. [QBR]
18. ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ [QBR] ನಾಡನ್ನು ಹಾದುಹೋಗುವಂತಿರಲಿಲ್ಲ. [QBR]
19. ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದದನ್ನು [QBR] ಮರೆಮಾಡದೆ ಪ್ರಕಟಿಸಿದ್ದಾರೆ. [QBR]
20. ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, [QBR] ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು. [QBR]
21. ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, [QBR] ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು. [QBR]
22. ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; [QBR] ಅವನ ಕತ್ತಿಯು ಅವನಿಗಾಗಿ ಕಾದಿದೆ. [QBR]
23. ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, [QBR] ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು. [QBR]
24. ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ [QBR] ಅವನನ್ನು ಹೆದರಿಸಿ ಸೋಲಿಸುವವು. [QBR]
25. ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ [QBR] ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ. [QBR]
26. ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ [QBR] ಆತನ ಮೇಲೆ ಬೀಳಬೇಕೆಂದು ಓಡಿದನು. [QBR]
27. ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು [QBR] ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು. [QBR]
28. ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, [QBR] ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು [QBR] ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು. [QBR]
29. ಇಂಥವನು ಐಶ್ವರ್ಯವಂತನಾಗುವುದಿಲ್ಲ, [QBR] ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ. [QBR]
30. ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, [QBR] ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, [QBR] ದೇವರ ಶ್ವಾಸದಿಂದ ಒಣಗಿ ಹೋಗುವನು. [QBR]
31. ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, [QBR] ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ, [QBR]
32. ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. [QBR] ಅವನ ಕೊಂಬೆಯು ಹಸುರಾಗಿರುವುದಿಲ್ಲ, [QBR]
33. ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, [QBR] ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು. [QBR]
34. ಭ್ರಷ್ಟರ ಸಂಘವು ನಿರರ್ಥಕ, [QBR] ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು. [QBR]
35. ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, [QBR] ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” [PE]