1. {#1ಎಲೀಫಜನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ }
2. [PS]ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, [PE][QS]“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, [QE][QS]ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ? [QE]
3. [QS]ಪ್ರಯೋಜನವಿಲ್ಲದ ನುಡಿಯಿಂದಲೂ, [QE][QS]ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ? [QE]
4. [QS]ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, [QE][QS]ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ. [QE]
5. [QS]ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. [QE][QS]ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ. [QE]
6. [QS]ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, [QE][QS]ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ. [QE]
7. [QS]ನೀನು ಆದಿಪುರುಷನೋ? [QE][QS]ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ? [QE]
8. [QS]ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? [QE][QS]ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ? [QE]
9. [QS]ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? [QE][QS]ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? [QE]
10. [QS]ತಲೆನರೆತು ನಿನ್ನ ತಂದೆಗಿಂತ [QE][QS]ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. [QE]
11. [QS]ದೇವರ ಆದರಣೆಗಳೂ, [QE][QS]ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ? [QE]
12. [QS]ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? [QE][QS]ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ? [QE]
13. [QS]ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ [QE][QS]ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! [QE]
14. [QS]ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? [QE][QS]ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ? [QE]
15. [QS]ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, [QE][QS]ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. [QE]
16. [QS]ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, [QE][QS]ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! [QE]
17. [QS]ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, [QE][QS]ಕಂಡದ್ದನ್ನೇ ವಿವರಿಸುವೆನು. [QE]
18. [QS]ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ [QE][QS]ನಾಡನ್ನು ಹಾದುಹೋಗುವಂತಿರಲಿಲ್ಲ. [QE]
19. [QS]ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದದನ್ನು [QE][QS]ಮರೆಮಾಡದೆ ಪ್ರಕಟಿಸಿದ್ದಾರೆ. [QE]
20. [QS]ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, [QE][QS]ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು. [QE]
21. [QS]ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, [QE][QS]ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು. [QE]
22. [QS]ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; [QE][QS]ಅವನ ಕತ್ತಿಯು ಅವನಿಗಾಗಿ ಕಾದಿದೆ. [QE]
23. [QS]‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, [QE][QS]ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು. [QE]
24. [QS]ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ [QE][QS]ಅವನನ್ನು ಹೆದರಿಸಿ ಸೋಲಿಸುವವು. [QE]
25. [QS]ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ [QE][QS]ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ. [QE]
26. [QS]ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ [QE][QS]ಆತನ ಮೇಲೆ ಬೀಳಬೇಕೆಂದು ಓಡಿದನು. [QE]
27. [QS]ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು [QE][QS]ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು. [QE]
28. [QS]ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, [QE][QS]‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು [QE][QS]ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು. [QE]
29. [QS]ಇಂಥವನು ಐಶ್ವರ್ಯವಂತನಾಗುವುದಿಲ್ಲ, [QE][QS]ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ. [QE]
30. [QS]ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, [QE][QS]ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, [QE][QS]ದೇವರ ಶ್ವಾಸದಿಂದ ಒಣಗಿ ಹೋಗುವನು. [QE]
31. [QS]ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, [QE][QS]ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ, [QE]
32. [QS]ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. [QE][QS]ಅವನ ಕೊಂಬೆಯು ಹಸುರಾಗಿರುವುದಿಲ್ಲ, [QE]
33. [QS]ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, [QE][QS]ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು. [QE]
34. [QS]ಭ್ರಷ್ಟರ ಸಂಘವು ನಿರರ್ಥಕ, [QE][QS]ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು. [QE]
35. [QS]ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, [QE][QS]ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” [QE]