1. {ಯೋಬನ ಪ್ರತ್ಯುತ್ತರದ ಮುಂದುವರಿಕೆ} [PS] “ನನ್ನ ಉಸಿರು ಕಟ್ಟುತ್ತಿದೆ [* ನನ್ನ ಉಸಿರು ಕಟ್ಟುತ್ತಿದೆ ಅಥವಾ ನನ್ನ ಆತ್ಮವು ಒಡೆದುಹೋಗಿದೆ.] , ನನ್ನ ಆಯಷ್ಕಾಲವು [† ಆಯಷ್ಕಾಲವು ಅಥವಾ ದಿನಗಳು.] ಮುಗಿದಿವೆ, [QBR] ಗೋರಿಯು ನನಗಾಗಿ ಕಾದಿದೆ. [QBR]
2. ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, [QBR] ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ. [QBR]
3. ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, [QBR] ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ. [QBR]
4. ವಿವೇಕವು ಪ್ರವೇಶಿಸದಂತೆ; [QBR] ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ. [QBR]
5. ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, [QBR] ಅವನ ಮಕ್ಕಳು ಕಂಗೆಡುವರು. [QBR]
6. ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, [QBR] ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ. [QBR]
7. ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, [QBR] ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ. [QBR]
8. ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, [QBR] ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. [QBR]
9. ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, [QBR] ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು. [QBR]
10. ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, [QBR] ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು. [QBR]
11. ನನ್ನ ದಿನಗಳು ಮುಗಿದುಹೋದವು. [QBR] ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು. [QBR]
12. ಇವರು ಇರುಳನ್ನು ಹಗಲೆಂದು ಸಾಧಿಸಿ, [QBR] ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ. [QBR]
13. ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, [QBR] ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. [QBR]
14. ಸಮಾಧಿಯನ್ನು, ‘ನೀನು, ನನ್ನ ತಂದೆ’ [QBR] ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ, [QBR]
15. ನನ್ನ ನಿರೀಕ್ಷೆ ಎಂಥದು? [QBR] ನನ್ನ ನಿರೀಕ್ಷೆಯನ್ನು ಯಾರು ನೋಡುವರು? [QBR]
16. ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? [QBR] ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” [PE]