1. {#1ಬಿಲ್ದದನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ }
2. [PS]ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು, [PE][QS]“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? [QE][QS]ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ. [QE]
3. [QS]ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? [QE][QS]ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? [QE]
4. [QS]ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, [QE][QS]ನಿನಗಾಗಿ ಲೋಕವೇ ಹಾಳಾಗಬೇಕೋ, [QE][QS]ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ? [QE]
5. [QS]ಹೇಗಾದರೂ ದುಷ್ಟನ ದೀಪವು ಆರುವುದು, [QE][QS]ಅವನ ಒಲೆಯು ಉರಿಯುವುದಿಲ್ಲ. [QE]
6. [QS]ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, [QE][QS]ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು. [QE]
7. [QS]ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, [QE][QS]ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು. [QE]
8. [QS]ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, [QE][QS]ಹಾಳು ಗುಂಡಿಯ ಮೇಲೆ ನಡೆಯುವನು. [QE]
9. [QS]ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, [QE][QS]ಉರುಲು ಅವನನ್ನು ಹಿಡಿಯುವುದು[* ಉರುಲು ಅವನನ್ನು ಹಿಡಿಯುವುದು ಅಥವಾ ಹಿಡಿದೆಳೆಯುವವರು ಅವನನ್ನು ಸೋಲಿಸಿದ್ದಾರೆ. ]. [QE]
10. [QS]ನೆಲದ ಮೇಲೆ ಪಾಶವೂ, [QE][QS]ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. [QE]
11. [QS]ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; [QE][QS]ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. [QE]
12. [QS]ಅವನ ಬಲವು ಕುಂದಿಹೋಗುವುದು. [QE][QS]ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು. [QE]
13. [QS]ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, [QE][QS]ಅವನ ಅಂಗಗಳನ್ನು ನುಂಗಿಬಿಡುವನು. [QE]
14. [QS]ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, [QE][QS]ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು. [QE]
15. [QS]ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, [QE][QS]ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು. [QE]
16. [QS]ಅವನ ವಂಶವೃಕ್ಷದ ಬೇರುಗಳು ಒಣಗುವುದು, [QE][QS]ಅದರ ರೆಂಬೆಯು ಮೇಲೆ ಬಾಡುವುದು. [QE]
17. [QS]ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, [QE][QS]ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ. [QE]
18. [QS]ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, [QE][QS]ಲೋಕದಿಂದಲೇ ಅಟ್ಟಿಬಿಡುವರು. [QE]
19. [QS]ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. [QE][QS]ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. [QE]
20. [QS] [† ಅಥವಾ ಹಿಂದಿನವರು ಅವನ ನಾಶನ ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ]ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, [QE][QS]ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. [QE]
21. [QS]ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. [QE][QS]ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.” [QE]