ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಬನು
1. {#1ಬಿಲ್ದದನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ }
2. [PS]ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು, [PE][QS]“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? [QE][QS]ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ. [QE]
3. [QS]ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? [QE][QS]ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? [QE]
4. [QS]ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, [QE][QS]ನಿನಗಾಗಿ ಲೋಕವೇ ಹಾಳಾಗಬೇಕೋ, [QE][QS]ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ? [QE]
5. [QS]ಹೇಗಾದರೂ ದುಷ್ಟನ ದೀಪವು ಆರುವುದು, [QE][QS]ಅವನ ಒಲೆಯು ಉರಿಯುವುದಿಲ್ಲ. [QE]
6. [QS]ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, [QE][QS]ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು. [QE]
7. [QS]ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, [QE][QS]ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು. [QE]
8. [QS]ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, [QE][QS]ಹಾಳು ಗುಂಡಿಯ ಮೇಲೆ ನಡೆಯುವನು. [QE]
9. [QS]ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, [QE][QS]ಉರುಲು ಅವನನ್ನು ಹಿಡಿಯುವುದು[* ಉರುಲು ಅವನನ್ನು ಹಿಡಿಯುವುದು ಅಥವಾ ಹಿಡಿದೆಳೆಯುವವರು ಅವನನ್ನು ಸೋಲಿಸಿದ್ದಾರೆ. ]. [QE]
10. [QS]ನೆಲದ ಮೇಲೆ ಪಾಶವೂ, [QE][QS]ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. [QE]
11. [QS]ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; [QE][QS]ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. [QE]
12. [QS]ಅವನ ಬಲವು ಕುಂದಿಹೋಗುವುದು. [QE][QS]ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು. [QE]
13. [QS]ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, [QE][QS]ಅವನ ಅಂಗಗಳನ್ನು ನುಂಗಿಬಿಡುವನು. [QE]
14. [QS]ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, [QE][QS]ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು. [QE]
15. [QS]ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, [QE][QS]ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು. [QE]
16. [QS]ಅವನ ವಂಶವೃಕ್ಷದ ಬೇರುಗಳು ಒಣಗುವುದು, [QE][QS]ಅದರ ರೆಂಬೆಯು ಮೇಲೆ ಬಾಡುವುದು. [QE]
17. [QS]ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, [QE][QS]ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ. [QE]
18. [QS]ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, [QE][QS]ಲೋಕದಿಂದಲೇ ಅಟ್ಟಿಬಿಡುವರು. [QE]
19. [QS]ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. [QE][QS]ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. [QE]
20. [QS] [† ಅಥವಾ ಹಿಂದಿನವರು ಅವನ ನಾಶನ ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ]ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, [QE][QS]ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. [QE]
21. [QS]ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. [QE][QS]ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
ಬಿಲ್ದದನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ 1 2 ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು, “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ. 3 ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? 4 ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ? 5 ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ. 6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು. 7 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು. 8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು. 9 ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು* ಉರುಲು ಅವನನ್ನು ಹಿಡಿಯುವುದು ಅಥವಾ ಹಿಡಿದೆಳೆಯುವವರು ಅವನನ್ನು ಸೋಲಿಸಿದ್ದಾರೆ. . 10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. 11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. 12 ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು. 13 ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು. 14 ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು. 15 ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು. 16 ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು. 17 ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ. 18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು. 19 ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. 20 ಅಥವಾ ಹಿಂದಿನವರು ಅವನ ನಾಶನ ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. 21 ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
×

Alert

×

Kannada Letters Keypad References