1. {#1ಚೋಫರನು ಯೋಬನಿಗೆ ನೀಡಿದ ಎರಡನೆಯ ಪ್ರತ್ಯುತ್ತರ }
2. [PS]ಆ ಮೇಲೆ ನಾಮಾಥ್ಯನಾದ ಚೋಫರನು ಹೀಗೆಂದನು, [PE][QS]“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, [QE][QS]ಆತುರವು ನನ್ನಲ್ಲಿ ತುಂಬಿದೆ. [QE]
3. [QS]ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, [QE][QS]ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ. [QE]
4. [QS]ಮನುಷ್ಯನು ಲೋಕದಲ್ಲಿ ಉದ್ಭವಿಸಿದ [QE][QS]ಪುರಾತನಕಾಲದಿಂದಲೂ, [QE]
5. [QS]ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, [QE][QS]ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ? [QE]
6. [QS]ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, [QE][QS]ಅವನ ತಲೆಯು ಮೋಡಗಳಿಗೆ ತಗುಲಿದರೂ, [QE]
7. [QS]ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, [QE][QS]ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು. [QE]
8. [QS]ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, [QE][QS]ರಾತ್ರಿಯ ಕನಸಿನ ಹಾಗೆ ಓಡಿಹೋಗುವನು. [QE]
9. [QS]ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, [QE][QS]ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ. [QE]
10. [QS]ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. [QE][QS]ಅವನು ತನ್ನ ಕೈಯಿಂದಲೇ[* ತನ್ನ ಕೈಯಿಂದಲೇ ಅಥವಾ ತನ್ನ ಮಕ್ಕಳ ಕೈಯಿಂದಲೇ. ] ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು. [QE]
11. [QS]ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, [QE][QS]ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು. [QE]
12. [QS]ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, [QE][QS]ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ, [QE]
13. [QS]ನುಂಗದೆ ಕಾಪಾಡುತ್ತಾ [QE][QS]ಬಾಯಲ್ಲೇ ಇಟ್ಟುಕೊಂಡಿದ್ದರೂ [QE]
14. [QS]ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, [QE][QS]ಅವನೊಳಗೆ ಹಾವಿನ ವಿಷವಾಗುವುದು. [QE]
15. [QS]ನುಂಗಿದ ಐಶ್ವರ್ಯವನ್ನು ಅವನು ಕಾರುವನು, [QE][QS]ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು. [QE]
16. [QS]ಅವನು ಚೀಪುವುದು ಹಾವಿನ ವಿಷವೇ, [QE][QS]ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು. [QE]
17. [QS]ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ [QE][QS]ನದಿಗಳನ್ನು ಅವನು ನೋಡುವುದೇ ಇಲ್ಲ. [QE]
18. [QS]ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, [QE][QS]ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ. [QE]
19. [QS]ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; [QE][QS]ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು. [QE]
20. [QS]ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, [QE][QS]ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ. [QE]
21. [QS]ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; [QE][QS]ಅವನ ಸುಖವು ಅಸ್ಥಿರವಾಗಿರುವುದು. [QE]
22. [QS]ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. [QE][QS]ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು. [QE]
23. [QS]ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; [QE][QS]ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು. [QE]
24. [QS]ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, [QE][QS]ತಾಮ್ರದ ಬಿಲ್ಲು ಅವನನ್ನು ಇರಿಯುವುದು. [QE]
25. [QS]ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, [QE][QS]ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, [QE][QS]ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು. [QE]
26. [QS]ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, [QE][QS]ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, [QE][QS]ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು. [QE]
27. [QS]ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. [QE][QS]ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು. [QE]
28. [QS]ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು[† ಅವನ ಮನೆಯ ಧನಧಾನ್ಯಗಳು ಅಥವಾ ಅವನ ಮನೆಯನ್ನು. ], [QE][QS]ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು. [QE]
29. [QS]ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, [QE][QS]ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.” [QE]