1. {#1ಯೋಬನ ಏಳನೆಯ ಸಂಭಾಷಣೆ: ಚೋಫರನಿಗೆ ನೀಡಿದ ಪ್ರತ್ಯುತ್ತರ }
2. [PS]ಆಗ ಯೋಬನು ಇಂತೆಂದನು, [PE][QS]“ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. [QE][QS]ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ. [QE]
3. [QS]ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, [QE][QS]ಆಮೇಲೆ ಹಾಸ್ಯಮಾಡಿದರೂ ಮಾಡಿರಿ. [QE]
4. [QS]ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? [QE][QS]ನಾನೇಕೆ ಬೇಸರಗೊಳ್ಳಬಾರದು? [QE]
5. [QS]ನನ್ನ ಕಡೆಗೆ ಗಮನಿಸಿ, [QE][QS]ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ, [QE]
6. [QS]ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, [QE][QS]ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ. [QE]
7. [QS]ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ [QE][QS]ಪ್ರಬಲಿಸುವುದಕ್ಕೂ ಕಾರಣವೇನು? [QE]
8. [QS]ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, [QE][QS]ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು. [QE]
9. [QS]ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; [QE][QS]ದೇವರ ದಂಡವು ಅವರ ಮೇಲೆ ಬೀಳದು. [QE]
10. [QS]ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; [QE][QS]ಅವರ ಹಸುವು ಕಂದುಹಾಕದೆ ಈಯುವುದು. [QE]
11. [QS]ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, [QE][QS]ಅವರ ಮಕ್ಕಳು ಕುಣಿದಾಡುವರು. [QE]
12. [QS]ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, [QE][QS]ಕೊಳಲಿನ ಧ್ವನಿಗೆ ಉಲ್ಲಾಸಪಡುವರು. [QE]
13. [QS]ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, [QE][QS]ಸಮಾಧಾನದಿಂದ[* ಸಮಾಧಾನದಿಂದ ಅಥವಾ ಕ್ಷಣಮಾತ್ರದಲ್ಲಿ. ] ಸಮಾಧಿಗೆ ಸೇರುವರು. [QE]
14. [QS]ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, [QE][QS]ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ [QE]
15. [QS]ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? [QE][QS]ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು. [QE]
16. [QS]ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, [QE][QS]ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! [QE]
17. [QS]ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? [QE][QS]ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? [QE][QS]ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ? [QE]
18. [QS]ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? [QE][QS]ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು? [QE]
19. [QS]‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, [QE][QS]ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ. [QE]
20. [QS]ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, [QE][QS]ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ. [QE]
21. [QS]ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ [QE][QS]ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು? [QE]
22. [QS]ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ? [QE]
23. [QS]ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು. [QE]
24. [QS]ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, [QE][QS]ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು. [QE]
25. [QS]ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, [QE][QS]ಮನೋವ್ಯಥೆಪಡುತ್ತಾ ಸಾಯುವನು. [QE]
26. [QS]ಇಬ್ಬರೂ ಧೂಳಿನಲ್ಲಿ ಮಲಗುವರು, [QE][QS]ಹುಳುಗಳು ಅವರನ್ನು ಮುತ್ತಿಕೊಳ್ಳುವವು. [QE]
27. [QS]ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, [QE][QS]ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ. [QE]
28. [QS]‘ಪ್ರಧಾನನ ಮನೆ ಏನಾಯಿತು? [QE][QS]ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ. [QE]
29. [QS]ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? [QE][QS]ಅವರು ಕೊಟ್ಟ ದೃಷ್ಟಾಂತಗಳಿಂದ, [QE]
30. [QS]ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, [QE][QS]ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ? [QE]
31. [QS]ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? [QE][QS]ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು? [QE]
32. [QS]ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; [QE][QS]ಅವನ ಗೋರಿಗೆ ಕಾವಲಿಡುವರು. [QE]
33. [QS]ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. [QE][QS]ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, [QE][QS]ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು. [QE]
34. [QS]ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! [QE][QS]ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.” [QE]