1. {#1ಎಲೀಫಜನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ }
2. [PS]ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, [PE][QS]“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? [QE][QS]ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ. [QE]
3. [QS]ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? [QE][QS]ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ? [QE]
4. [QS]ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ [QE][QS]ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ? [QE]
5. [QS]ನಿನ್ನ ಕೆಟ್ಟತನವು ಬಹಳವಲ್ಲವೇ? [QE][QS]ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ? [QE]
6. [QS]ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, [QE][QS]ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ. [QE]
7. [QS]ಬಳಲಿದವನಿಗೆ ನೀರು ಕೊಡದೆ, [QE][QS]ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ. [QE]
8. [QS]ಬಲಿಷ್ಠನಾದರೆ ದೇಶವೇ ಅವನದು, [QE][QS]ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ. [QE]
9. [QS]ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, [QE][QS]ಅನಾಥರ ಕೈಗಳನ್ನು ಮುರಿದಿದ್ದಿ. [QE]
10. [QS]ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, [QE][QS]ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. [QE]
11. [QS]ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ [QE][QS]ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ. [QE]
12. [QS]ದೇವರು ಉನ್ನತ ಆಕಾಶದಲ್ಲಿಲ್ಲವೋ? [QE][QS]ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು! [QE]
13. [QS]ನೀನಾದರೋ, ‘ದೇವರಿಗೆ ಏನು ಗೊತ್ತು? [QE][QS]ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ? [QE]
14. [QS]ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; [QE][QS]ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ. [QE]
15. [QS]ಕೆಟ್ಟವರು ಮೊದಲಿನಿಂದಲೂ, [QE][QS]ನಡೆದ ದಾರಿಯನ್ನು ನೀನು ಹಿಡಿಯುವಿಯಾ? [QE]
16. [QS]ಅಕಾಲ ಮರಣವು ಅವರನ್ನು ಅಪಹರಿಸಿತು, [QE][QS]ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು. [QE]
17. [QS]ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, [QE][QS]ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು. [QE]
18. [QS]ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. [QE][QS]ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! [QE]
19. [QS]ನೀತಿವಂತರು ಇದನ್ನು ನೋಡಿ ಹಿಗ್ಗುವರು, [QE][QS]ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು. [QE]
20. [QS]‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, [QE][QS]ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು. [QE]
21. [QS]ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, [QE][QS]ಇದರಿಂದ ನಿನಗೆ ಶುಭವಾಗುವುದು. [QE]
22. [QS]ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, [QE][QS]ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ. [QE]
23. [QS]ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, [QE][QS]ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. [QE]
24. [QS]ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, [QE][QS]ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು. [QE]
25. [QS]ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು. [QE]
26. [QS]ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, [QE][QS]ದೇವರ ಅಭಿಮುಖನಾಗಿರುವೆ. [QE]
27. [QS]ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, [QE][QS]ಆತನಿಗೆ ಹರಕೆಗಳನ್ನು ಒಪ್ಪಿಸುವಿ. [QE]
28. [QS]ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, [QE][QS]ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು. [QE]
29. [QS]ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, [QE][QS]ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು. [QE]
30. [QS]ನಿರ್ದೋಷಿಯನ್ನು ಆತನು ತಪ್ಪಿಸುವನು, [QE][QS]ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.” [QE]