1. ಆಗ ಯೋಬನು ಇಂತೆಂದನು, [QBR]
2. “ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; [QBR] ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ? [QBR]
3. ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! [QBR] ಆತನ ಸನ್ನಿಧಿಯನ್ನು ಸೇರೆನು. [QBR]
4. ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು [QBR] ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು. [QBR]
5. ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು [QBR] ಆತನು ನನಗೆ ಹೇಳುವುದನ್ನು ವಿವೇಚಿಸುವೆನು. [QBR]
6. ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? [QBR] ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು. [QBR]
7. ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. [QBR] ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. [QBR]
8. ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, [QBR] ಹಿಂದೆ ಹೋದರೂ ಆತನನ್ನು ತಿಳಿಯಲಾರೆನು. [QBR]
9. ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, [QBR] ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ. [QBR]
10. ಆತನಾದರೋ ನನ್ನ ದಾರಿಯನ್ನು ಬಲ್ಲನು, [QBR] ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. [QBR]
11. ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, [QBR] ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ. [QBR]
12. ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, [QBR] ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. [QBR]
13. ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? [QBR] ತಾನು ಬಯಸಿದ್ದನ್ನೇ ಮಾಡುತ್ತಾನೆ. [QBR]
14. ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, [QBR] ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ. [QBR]
15. ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; [QBR] ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ. [QBR]
16. ನನ್ನ ಹೃದಯವನ್ನು ಕುಂದಿಸಿದವನು ದೇವರೇ, [QBR] ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ. [QBR]
17. ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, [QBR] ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.” [PE]