1. {#1ಯೋಬನ ಎಂಟನೆಯ ಸಂಭಾಷಣೆ: ಎಲೀಫಜನಿಗೆ ನೀಡಿದ ಪ್ರತ್ಯುತ್ತರ }
2. [PS]ಆಗ ಯೋಬನು ಇಂತೆಂದನು, [PE][QS]“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; [QE][QS]ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ? [QE]
3. [QS]ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! [QE][QS]ಆತನ ಸನ್ನಿಧಿಯನ್ನು ಸೇರೆನು. [QE]
4. [QS]ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು [QE][QS]ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು. [QE]
5. [QS]ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು [QE][QS]ಆತನು ನನಗೆ ಹೇಳುವುದನ್ನು ವಿವೇಚಿಸುವೆನು. [QE]
6. [QS]ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? [QE][QS]ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು. [QE]
7. [QS]ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. [QE][QS]ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. [QE]
8. [QS]ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, [QE][QS]ಹಿಂದೆ ಹೋದರೂ ಆತನನ್ನು ತಿಳಿಯಲಾರೆನು. [QE]
9. [QS]ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, [QE][QS]ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ. [QE]
10. [QS]ಆತನಾದರೋ ನನ್ನ ದಾರಿಯನ್ನು ಬಲ್ಲನು, [QE][QS]ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. [QE]
11. [QS]ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, [QE][QS]ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ. [QE]
12. [QS]ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, [QE][QS]ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. [QE]
13. [QS]ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? [QE][QS]ತಾನು ಬಯಸಿದ್ದನ್ನೇ ಮಾಡುತ್ತಾನೆ. [QE]
14. [QS]ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, [QE][QS]ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ. [QE]
15. [QS]ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; [QE][QS]ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ. [QE]
16. [QS]ನನ್ನ ಹೃದಯವನ್ನು ಕುಂದಿಸಿದವನು ದೇವರೇ, [QE][QS]ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ. [QE]
17. [QS]ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, [QE][QS]ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.” [QE]