1. {#1ಯೋಬನ ಪ್ರತ್ಯುತ್ತರದ ಮುಂದುವರಿಕೆ } [QS]“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? [QE][QS]ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ? [QE]
2. [QS]ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. [QE][QS]ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ. [QE]
3. [QS]ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, [QE][QS]ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. [QE]
4. [QS]ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, [QE][QS]ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ. [QE]
5. [QS]ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, [QE][QS]ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; [QE][QS]ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು. [QE]
6. [QS]ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, [QE][QS]ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. [QE]
7. [QS]ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, [QE][QS]ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. [QE]
8. [QS]ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, [QE][QS]ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು. [QE]
9. [QS]ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, [QE][QS]ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ. [QE]
10. [QS]ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; [QE][QS]ಹಸಿವಿನಿಂದಲೇ ಸಿವುಡುಗಳನ್ನು ಹೊರುವರು. [QE]
11. [QS]ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; [QE][QS]ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು. [QE]
12. [QS]ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, [QE][QS]ಗಾಯಪಟ್ಟವರು ಮೊರೆಯಿಡುವರು, [QE][QS][* ಅಥವಾ ದೇವರು ದುಷ್ಟರಾದ ಧನಿಕರನ್ನು ಆರೋಪಿಸುವುದಿಲ್ಲ. ]ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು. [QE]
13. [QS]ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; [QE][QS]ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, [QE][QS]ಅದರ ಹಾದಿಗಳಲ್ಲಿ ಇರುವುದಿಲ್ಲ. [QE]
14. [QS]ಕೊಲೆಪಾತಕನು ಮುಂಜಾನೆ ಎದ್ದು, [QE][QS]ದಿಕ್ಕಿಲ್ಲದ ಬಡವರನ್ನು ಕೊಂದು, [QE][QS]ರಾತ್ರಿಯಲ್ಲಿ ಕಳ್ಳನಂತಿರುವನು. [QE]
15. [QS]ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, [QE][QS]ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು. [QE]
16. [QS]ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; [QE][QS]ಹಗಲಿನಲ್ಲಿ ಅಡಗಿಕೊಂಡಿದ್ದು; [QE][QS]ಬೆಳಕನ್ನು ತಿಳಿಯದೆ ಇರುವರು. [QE]
17. [QS]ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, [QE][QS]ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. [QE]
18. [QS](ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, [QE][QS]ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. [QE][QS]ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. [QE]
19. [QS]ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, [QE][QS]ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. [QE]
20. [QS]ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; [QE][QS]ಹುಳವು ಅವನ ಹೆಣವನ್ನು ಸವಿದು ತಿನ್ನುವುದು; [QE][QS]ಇನ್ನು ಮೇಲೆ ಯಾರಿಗೂ ಅವನ ನೆನಪಿರದು; [QE][QS]ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು. [QE]
21. [QS]ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, [QE][QS]ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). [QE]
22. [QS]ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, [QE][QS]ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. [QE]
23. [QS]ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; [QE][QS]ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು. [QE]
24. [QS]ಅವರು ಉನ್ನತಿಗೆ ಬರುವರು; [QE][QS]ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? [QE][QS]ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು. [QE]
25. [QS]ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; [QE][QS]ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.” [QE]