1. {ಯೋಬನ ಪ್ರತ್ಯುತ್ತರದ ಮುಂದುವರಿಕೆ} [PS] “ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? [QBR] ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ? [QBR]
2. ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. [QBR] ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ. [QBR]
3. ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, [QBR] ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. [QBR]
4. ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, [QBR] ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ. [QBR]
5. ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, [QBR] ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; [QBR] ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು. [QBR]
6. ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, [QBR] ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. [QBR]
7. ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, [QBR] ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. [QBR]
8. ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, [QBR] ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು. [QBR]
9. ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, [QBR] ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ. [QBR]
10. ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; [QBR] ಹಸಿವಿನಿಂದಲೇ ಸಿವುಡುಗಳನ್ನು ಹೊರುವರು. [QBR]
11. ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; [QBR] ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು. [QBR]
12. ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, [QBR] ಗಾಯಪಟ್ಟವರು ಮೊರೆಯಿಡುವರು, [QBR] [* ಅಥವಾ ದೇವರು ದುಷ್ಟರಾದ ಧನಿಕರನ್ನು ಆರೋಪಿಸುವುದಿಲ್ಲ.] ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು. [QBR]
13. ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; [QBR] ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, [QBR] ಅದರ ಹಾದಿಗಳಲ್ಲಿ ಇರುವುದಿಲ್ಲ. [QBR]
14. ಕೊಲೆಪಾತಕನು ಮುಂಜಾನೆ ಎದ್ದು, [QBR] ದಿಕ್ಕಿಲ್ಲದ ಬಡವರನ್ನು ಕೊಂದು, [QBR] ರಾತ್ರಿಯಲ್ಲಿ ಕಳ್ಳನಂತಿರುವನು. [QBR]
15. ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, [QBR] ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು. [QBR]
16. ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; [QBR] ಹಗಲಿನಲ್ಲಿ ಅಡಗಿಕೊಂಡಿದ್ದು; [QBR] ಬೆಳಕನ್ನು ತಿಳಿಯದೆ ಇರುವರು. [QBR]
17. ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, [QBR] ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. [QBR]
18. (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, [QBR] ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. [QBR] ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. [QBR]
19. ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, [QBR] ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. [QBR]
20. ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; [QBR] ಹುಳವು ಅವನ ಹೆಣವನ್ನು ಸವಿದು ತಿನ್ನುವುದು; [QBR] ಇನ್ನು ಮೇಲೆ ಯಾರಿಗೂ ಅವನ ನೆನಪಿರದು; [QBR] ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು. [QBR]
21. ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, [QBR] ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). [QBR]
22. ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, [QBR] ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. [QBR]
23. ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; [QBR] ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು. [QBR]
24. ಅವರು ಉನ್ನತಿಗೆ ಬರುವರು; [QBR] ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? [QBR] ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು. [QBR]
25. ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; [QBR] ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.” [PE]