ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಬನು
1. {#1ಯೋಬನ ಒಂಭತ್ತನೆಯ ಸಂಭಾಷಣೆ: ಬಿಲ್ದನಿಗೆ ನೀಡಿದ ಪ್ರತ್ಯುತ್ತರ }
2. [PS]ಆಗ ಯೋಬನು ಹೀಗೆ ಉತ್ತರಕೊಟ್ಟನು, [PE][QS]“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! [QE][QS]ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು. [QE]
3. [QS]ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! [QE][QS]ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! [QE]
4. [QS]ಯಾರಿಗೆ ಮಾತುಗಳನ್ನು ಕಲಿಸಿದ್ದಿ? [QE][QS]ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?” [QE]
5. {#1ಬಿಲ್ದದನ ಪ್ರತ್ಯುತ್ತರ } [QS]ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, [QE][QS]ಪ್ರೇತಗಳು ಆತನ ಭಯದಿಂದ ಯಾತನೆಪಡುವವು. [QE]
6. [QS]ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, [QE][QS]ನಾಶಲೋಕವು ಮರೆಯಾಗಿಲ್ಲ. [QE]
7. [QS]ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, [QE][QS]ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ. [QE]
8. [QS]ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, [QE][QS]ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು. [QE]
9. [QS]ತನ್ನ ಸಿಂಹಾಸನಕ್ಕೆ ಮರೆಯಾಗಿ, [QE][QS]ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು. [QE]
10. [QS]ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, [QE][QS]ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ. [QE]
11. [QS]ಆಕಾಶಮಂಡಲದ ಸ್ತಂಭಗಳು, [QE][QS]ಆತನ ಗದರಿಕೆಯಿಂದ ಬೆರಗಾಗಿ ಕದಲುವವು. [QE]
12. [QS]ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; [QE][QS]ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು. [QE]
13. [QS]ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, [QE][QS]ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು. [QE]
14. [QS]ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. [QE][QS]ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, [QE][QS]ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 42
ಯೋಬನ ಒಂಭತ್ತನೆಯ ಸಂಭಾಷಣೆ: ಬಿಲ್ದನಿಗೆ ನೀಡಿದ ಪ್ರತ್ಯುತ್ತರ 1 2 ಆಗ ಯೋಬನು ಹೀಗೆ ಉತ್ತರಕೊಟ್ಟನು, “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು. 3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! 4 ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?” ಬಿಲ್ದದನ ಪ್ರತ್ಯುತ್ತರ 5 ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು. 6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. 7 ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ. 8 ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು. 9 ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು. 10 ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ. 11 ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು. 12 ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು. 13 ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು. 14 ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 42
×

Alert

×

Kannada Letters Keypad References