1. {#1ಯೋಬನು ಮತ್ತೊಮ್ಮೆ ಪ್ರತ್ಯುತ್ತರ ನೀಡಿದ್ದು }
2. [PS]ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು, [PE][QS]“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, [QE][QS]ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)! [QE]
3. [QS]ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, [QE][QS]ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ, [QE]
4. [QS]ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, [QE][QS]ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ. [QE]
5. [QS]ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. [QE][QS]ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ. [QE]
6. [QS]ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. [QE][QS]ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ. [QE]
7. [QS]ನನ್ನ ಹಗೆಗೆ ದುಷ್ಟನ ಗತಿಯಾಗಲಿ, [QE][QS]ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ! [QE]
8. [QS]ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, [QE][QS]ಅವನಿಗೆ ನಿರೀಕ್ಷೆಯೆಲ್ಲಿರುವುದು? [QE]
9. [QS]ಅವನಿಗೆ ಶ್ರಮೆ ಬರಲು, [QE][QS]ದೇವರು ಅವನ ಮೊರೆಯನ್ನು ಆಲೈಸುವನೋ? [QE]
10. [QS]ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, [QE][QS]ಆತನನ್ನು ಸರ್ವದಾ ಪ್ರಾರ್ಥಿಸುವನೇ? [QE]
11. [QS]ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; [QE][QS]ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು. [QE]
12. [QS]ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; [QE][QS]ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ? [QE]
13. [QS]ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, [QE][QS]ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ. [QE]
14. [QS]ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, [QE][QS]ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು. [QE]
15. [QS]ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, [QE][QS][* ಅಥವಾ ಅವನ ]ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ. [QE]
16. [QS]ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, [QE][QS]ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ, [QE]
17. [QS]ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. [QE][QS]ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು. [QE]
18. [QS]ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, [QE][QS]ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು. [QE]
19. [QS]ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, [QE][QS]ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ. [QE]
20. [QS]ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, [QE][QS]ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು. [QE]
21. [QS]ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, [QE][QS]ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು. [QE]
22. [QS]ಆ [† ಅಥವಾ ದೇವರು ]ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, [QE][QS]ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು. [QE]
23. [QS]ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, [QE][QS]ಆಚೆಗೆ ಹೊರಡಿಸುವರು.” [QE]