1. {#1ಯೋಬನು ಜ್ಞಾನ ಮತ್ತು ತಿಳಿವಳಿಕೆ ಕುರಿತು ಮಾತನಾಡಿದ್ದು } [QS]“ಬೆಳ್ಳಿ ಸಿಕ್ಕುವ ಗಣಿಯೂ, [QE][QS]ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ. [QE]
2. [QS]ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, [QE][QS]ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. [QE]
3. [QS]ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, [QE][QS]ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು. [QE]
4. [QS]ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, [QE][QS]ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು. [QE]
5. [QS]ಭೂಮಿಯು ಅನ್ನವನ್ನು ಕೊಡುವುದು, [QE][QS]ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು. [QE]
6. [QS]ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, [QE][QS]ಅದರಲ್ಲಿ ಚಿನ್ನದ ಪುಡಿಯೂ ಇರುವುದು. [QE]
7. [QS]ಆ ದಾರಿಯು ಯಾವ ಹದ್ದಿಗೂ ತಿಳಿಯದು, [QE][QS]ಗಿಡಗದ ಕಣ್ಣಿಗೂ ಬಿದ್ದಿಲ್ಲ. [QE]
8. [QS]ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, [QE][QS]ಸಿಂಹವು ಆ ಮಾರ್ಗವನ್ನು ತುಳಿದಿಲ್ಲ. [QE]
9. [QS]ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು. [QE]
10. [QS]ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; [QE][QS]ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು. [QE]
11. [QS]ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, [QE][QS]ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು. [QE]
12. [QS]ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ? [QE]
13. [QS]ಅದರ ಕ್ರಯವು ಯಾರಿಗೂ ಗೊತ್ತಿಲ್ಲ, [QE][QS]ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು. [QE]
14. [QS]ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, [QE][QS]ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು. [QE]
15. [QS]ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, [QE][QS]ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ. [QE]
16. [QS]ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, [QE][QS]ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು. [QE]
17. [QS]ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? [QE][QS]ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ? [QE]
18. [QS]ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. [QE][QS]ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ! [QE]
19. [QS]ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, [QE][QS]ಶುದ್ಧ ಕನಕದೊಡನೆ ಅದನ್ನು ತೂಗಲಾಗದು. [QE]
20. [QS]ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? [QE][QS]ವಿವೇಕವು ಯಾವ ಸ್ಥಳದಲ್ಲಿ ದೊರಕೀತು? [QE]
21. [QS]ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, [QE][QS]ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. [QE]
22. [QS]ನಾಶನವೂ[* ನಾಶನವೂ ಅಥವಾ ಅಬ್ಬದೋನ್ ಅಂದರೆ ಅಧೋಲೋಕ. ], ಮೃತ್ಯುವೂ, [QE][QS]‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು. [QE]
23. [QS]ಅದರ ಮಾರ್ಗವನ್ನು ಬಲ್ಲವನು ದೇವರೇ; [QE][QS]ಅದರ ಸ್ಥಳವು ಆತನೊಬ್ಬನಿಗೇ ಗೊತ್ತು. [QE]
24. [QS]ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ [QE][QS]ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ. [QE]
25. [QS]ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ [QE][QS]ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು. [QE]
26. [QS]ಮಳೆಗೆ ಕಟ್ಟಳೆಯನ್ನೂ, [QE][QS]ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ, [QE]
27. [QS]ಜ್ಞಾನವನ್ನು ಕಂಡು ಲಕ್ಷಿಸಿದನು, [QE][QS]ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು. [QE]
28. [QS]ಆಮೇಲೆ ಮನುಷ್ಯರಿಗೆ, [QE][QS]‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’ ” ಎಂದು ಹೇಳಿದನು. [QE]