1. {ಯೋಬನು ತನ್ನ ಸಂಕಟದ ಬಗ್ಗೆ ಮಾತನಾಡಿದ್ದು} [PS] ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; [QBR] ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. [QBR]
2. ಅವರ ಕೈ ಬಲದಿಂದ ನನಗೆ ಏನಾದೀತು? [QBR] ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ. [QBR]
3. ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, [QBR] ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. [QBR]
4. ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು [QBR] ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು. [QBR]
5. ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, [QBR] ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು. [QBR]
6. ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, [QBR] ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. [QBR]
7. ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, [QBR] ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. [QBR]
8. ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. [QBR] ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ. [QBR]
9. ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. [QBR] ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ. [QBR]
10. ನನಗೆ ಅಸಹ್ಯಪಟ್ಟು ದೂರ ನಿಂತು, [QBR] ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು. [QBR]
11. ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. [QBR] ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. [QBR]
12. ಆ ಕಲಹಗಾರರು ನನ್ನ ಬಲಗಡೆ ಎದ್ದು, [QBR] ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ. [QBR]
13. ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; [QBR] ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. [QBR]
14. ಕೋಟೆ ಬಿರುಕುಗಳಲ್ಲಿ ನುಗ್ಗಿ, [QBR] ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. [QBR]
15. ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; [QBR] ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; [QBR] ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. [QBR]
16. ಈಗ ನನ್ನ ಆತ್ಮವು ಕರಗಿಹೋಗಿದೆ, [QBR] ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. [QBR]
17. ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, [QBR] ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ. [QBR]
18. ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; [QBR] ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ. [QBR]
19. ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, [QBR] ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ. [QBR]
20. ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, [QBR] ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ. [QBR]
21. ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, [QBR] ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ. [QBR]
22. ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, [QBR] ಅದರ ಆರ್ಭಟದಲ್ಲಿ ಮಾಯಮಾಡುತ್ತಿ. [QBR]
23. ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, [QBR] ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ. [QBR]
24. ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? [QBR] ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ? [QBR]
25. ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? [QBR] ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ. [QBR]
26. ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, [QBR] ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು. [QBR]
27. ನನ್ನ ಹೃದಯವು ಕುದಿಯುತ್ತಿದೆ, [QBR] ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. [QBR]
28. ಸಂತೈಸುವ ಸೂರ್ಯನಿಲ್ಲದೆ; [QBR] ಮಂಕುಬಡಿದಂತೆ ಅಲೆಯುತ್ತಾ [QBR] ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. [QBR] ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ. [QBR]
29. ನಾನು ನರಿಗಳ ತಮ್ಮನೂ, [QBR] ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. [QBR]
30. ನನ್ನ ಚರ್ಮವು ಕರಿದಾಗಿ ಉದುರುತ್ತದೆ, [QBR] ನನ್ನ ಎಲುಬುಗಳು ತಾಪದಿಂದ ಬೆಂದಿದೆ. [QBR]
31. ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, [QBR] ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. [PE]