1. {#1ಯೋಬನು ತನ್ನ ಸಂಕಟದ ಬಗ್ಗೆ ಮಾತನಾಡಿದ್ದು } [PS]ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; [PE][QS]ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. [QE]
2. [QS]ಅವರ ಕೈ ಬಲದಿಂದ ನನಗೆ ಏನಾದೀತು? [QE][QS]ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ. [QE]
3. [QS]ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, [QE][QS]ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. [QE]
4. [QS]ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು [QE][QS]ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು. [QE]
5. [QS]ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, [QE][QS]ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು. [QE]
6. [QS]ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, [QE][QS]ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. [QE]
7. [QS]ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, [QE][QS]ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. [QE]
8. [QS]ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. [QE][QS]ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ. [QE]
9. [QS]ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. [QE][QS]ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ. [QE]
10. [QS]ನನಗೆ ಅಸಹ್ಯಪಟ್ಟು ದೂರ ನಿಂತು, [QE][QS]ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು. [QE]
11. [QS]ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. [QE][QS]ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. [QE]
12. [QS]ಆ ಕಲಹಗಾರರು ನನ್ನ ಬಲಗಡೆ ಎದ್ದು, [QE][QS]ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ. [QE]
13. [QS]ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; [QE][QS]ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. [QE]
14. [QS]ಕೋಟೆ ಬಿರುಕುಗಳಲ್ಲಿ ನುಗ್ಗಿ, [QE][QS]ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. [QE]
15. [QS]ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; [QE][QS]ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; [QE][QS]ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. [QE]
16. [QS]ಈಗ ನನ್ನ ಆತ್ಮವು ಕರಗಿಹೋಗಿದೆ, [QE][QS]ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. [QE]
17. [QS]ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, [QE][QS]ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ. [QE]
18. [QS]ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; [QE][QS]ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ. [QE]
19. [QS]ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, [QE][QS]ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ. [QE]
20. [QS]ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, [QE][QS]ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ. [QE]
21. [QS]ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, [QE][QS]ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ. [QE]
22. [QS]ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, [QE][QS]ಅದರ ಆರ್ಭಟದಲ್ಲಿ ಮಾಯಮಾಡುತ್ತಿ. [QE]
23. [QS]ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, [QE][QS]ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ. [QE]
24. [QS]ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? [QE][QS]ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ? [QE]
25. [QS]ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? [QE][QS]ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ. [QE]
26. [QS]ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, [QE][QS]ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು. [QE]
27. [QS]ನನ್ನ ಹೃದಯವು ಕುದಿಯುತ್ತಿದೆ, [QE][QS]ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. [QE]
28. [QS]ಸಂತೈಸುವ ಸೂರ್ಯನಿಲ್ಲದೆ; [QE][QS]ಮಂಕುಬಡಿದಂತೆ ಅಲೆಯುತ್ತಾ [QE][QS]ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. [QE][QS]ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ. [QE]
29. [QS]ನಾನು ನರಿಗಳ ತಮ್ಮನೂ, [QE][QS]ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. [QE]
30. [QS]ನನ್ನ ಚರ್ಮವು ಕರಿದಾಗಿ ಉದುರುತ್ತದೆ, [QE][QS]ನನ್ನ ಎಲುಬುಗಳು ತಾಪದಿಂದ ಬೆಂದಿದೆ. [QE]
31. [QS]ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, [QE][QS]ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. [QE]