1. {ಯೋಬನು ತನ್ನ ನಿರ್ದೋಷದ ಬಗ್ಗೆ ಮಾತನಾಡಿದ್ದು} [PS] “ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು [QBR] ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ, [QBR]
2. ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, [QBR] ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು? [QBR]
3. ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, [QBR] ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ? [QBR]
4. ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು. [QBR]
5. ಒಂದು ವೇಳೆ ನಾನು ಕಪಟತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ, [QBR]
6. ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, [QBR] ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ! [QBR]
7. ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, [QBR] ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, [QBR] ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ, [QBR]
8. ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, [QBR] ನನ್ನ ಬೆಳೆಯು ನಿರ್ಮೂಲವಾಗಲಿ! [QBR]
9. ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, [QBR] ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ, [QBR]
10. ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, [QBR] ಇತರರು ಆಕೆಯನ್ನು ಸಂಗಮಿಸಲಿ! [QBR]
11. ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, [QBR] ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು. [QBR]
12. ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, [QBR] ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು. [QBR]
13. ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, [QBR] ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ [QBR]
14. ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು? [QBR]
15. ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ. [QBR]
16. ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ? [QBR]
17. ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, [QBR] ನಾನೊಬ್ಬನೇ ತಿಂದೆನೋ? [QBR]
18. ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, [QBR] ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ. [QBR]
19. ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, [QBR] ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ, [QBR]
20. ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ? [QBR]
21. ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, [QBR] ಅನಾಥನ ಮೇಲೆ ಕೈಮಾಡಿದೆನೋ? [QBR]
22. ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, [QBR] ತೋಳು ಸಂದಿನಿಂದ ಮುರಿದು ಬೀಳಲಿ. [QBR]
23. ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, [QBR] ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ. [QBR]
24. ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, [QBR] ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ, [QBR]
25. ನನ್ನ ಆಸ್ತಿ ದೊಡ್ಡದೆಂದೂ, [QBR] ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ, [QBR]
26. ಸೂರ್ಯನು ಪ್ರಕಾಶಿಸುವುದನ್ನಾಗಲಿ, [QBR] ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ, [QBR]
27. ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ, [QBR]
28. ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, [QBR] ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು. [QBR]
29. ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, [QBR] ಅವನ ನಾಶನಕ್ಕೆ ಹಿಗ್ಗಿದೆನೋ? [QBR]
30. ಇಲ್ಲವೇ ಇಲ್ಲ, [QBR] ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ. [QBR]
31. ನನ್ನ ಗುಡಾರದ ಆಳುಗಳು, [QBR] ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ? [QBR]
32. ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, [QBR] ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ. [QBR]
33. ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, [QBR] ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ, [QBR]
34. ನಾನು ಬಾಗಿಲು ದಾಟದೆ ಮೌನವಾಗಿದ್ದು, [QBR] ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, [QBR] ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ, [QBR]
35. ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! [QBR] ಇದೇ ನನ್ನ ಕೈಗುರುತು ನೋಡಿರಿ, [QBR] ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! [QBR] ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ! [QBR]
36. ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, [QBR] ಕಿರೀಟವನ್ನಾಗಿ ಧರಿಸುತ್ತಿದ್ದೆನು. [QBR]
37. ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, [QBR] ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು. [QBR]
38. ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ, [QBR]
39. ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, [QBR] ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ, [QBR]
40. ಗೋದಿಗೆ ಬದಲಾಗಿ ಮುಳ್ಳುಗಳೂ, [QBR] ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. [QBR] ಹೀಗೆ ಯೋಬನ ಮಾತುಗಳು ಮುಗಿದವು. [PE]