1. {#1ಎಲೀಹುವಿನ ಮೊದಲನೆಯ ಸಂಭಾಷಣೆ } [PS]ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
2. ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು. [PE]
3. [PS]ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
4. ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
5. ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು. [PE]
6. [PS]ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; [PE][QS]ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.” [QE]
7. [QS]ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, [QE][QS]ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು. [QE]
8. [QS]ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, [QE][QS]ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ. [QE]
9. [QS]ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ. [QE]
10. [QS]ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, [QE][QS]ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ. [QE]
11. [QS]ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; [QE][QS]ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು. [QE]
12. [QS]ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; [QE][QS]ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, [QE][QS]ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ. [QE]
13. [QS]‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, [QE][QS]ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ. [QE]
14. [QS]ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; [QE][QS]ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು. [QE]
15. [QS]ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, [QE][QS]ಅವರ ಸೊಲ್ಲೇ ಅಡಗಿಹೋಯಿತು. [QE]
16. [QS]ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, [QE][QS]ನಾನೂ ಕಾದುಕೊಂಡಿರಬೇಕೋ? [QE]
17. [QS]ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, [QE][QS]ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು. [QE]
18. [QS]ನನ್ನಲ್ಲಿ ಮಾತುಗಳು ತುಂಬಿವೆ, [QE][QS]ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ. [QE]
19. [QS]ಆಹಾ, ದ್ರಾಕ್ಷಾರಸವನ್ನು ತುಂಬಿ, [QE][QS]ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ. [QE]
20. [QS]ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. [QE][QS]ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು. [QE]
21. [QS]ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, [QE][QS]ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು. [QE]
22. [QS]ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; [QE][QS]ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು. [QE]