1. {#1ಎಲೀಹು ಯೋಬನಿಗೆ ಸವಾಲೆಸೆದಿದ್ದು } [QS]ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು. [QE]
2. [QS]ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ [QE][QS]ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ. [QE]
3. [QS]ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, [QE][QS]ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. [QE]
4. [QS]ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, [QE][QS]ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ. [QE]
5. [QS]ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, [QE][QS]ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. [QE]
6. [QS]ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. [QE][QS]ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ. [QE]
7. [QS]ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, [QE][QS]ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. [QE]
8. [QS]ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, [QE][QS]ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ, [QE]
9. [QS]‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ. [QE]
10. [QS]ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, [QE][QS]ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ. [QE]
11. [QS]ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, [QE][QS]ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ. [QE]
12. [QS]ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, [QE][QS]ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. [QE]
13. [QS] [* ಅಥವಾ ಆತನು ತನ್ನ ಕಾರ್ಯಗಳ ಬಗ್ಗೆ ಉತ್ತರ ದಯಪಾಲಿಸುವುದಿಲ್ಲ. ]ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, [QE][QS]ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ? [QE]
14. [QS]ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, [QE][QS]ಮನುಷ್ಯನಾದರೋ ಲಕ್ಷಿಸುವುದಿಲ್ಲ. [QE]
15. [QS]ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, [QE][QS]ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, [QE]
16. [QS]ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು. [QE]
17. [QS]ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, [QE][QS]ಮಾನವನಿಗೆ ಗರ್ವವನ್ನು ಮರೆಮಾಡುವನು. [QE]
18. [QS]ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, [QE][QS]ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು. [QE]
19. [QS]ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, [QE][QS]ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು. [QE]
20. [QS]ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, [QE][QS]ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು. [QE]
21. [QS]ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, [QE][QS]ಕಾಣದಿದ್ದ ಅವನ ಎಲುಬುಗಳು ಬಯಲಾಗುವವು. [QE]
22. [QS]ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, [QE][QS]ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು. [QE]
23. [QS]ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು [QE][QS]ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ, [QE]
24. [QS]ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, [QE][QS]‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ, [QE]
25. [QS]ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. [QE][QS]ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು. [QE]
26. [QS]ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, [QE][QS]ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, [QE][QS]ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು. [QE]
27. [QS]ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, [QE][QS]ಆತನು ಮುಯ್ಯಿತೀರಿಸಲಿಲ್ಲ. [QE]
28. [QS]ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, [QE][QS]ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು. [QE]
29. [QS]ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು. [QE]
30. [QS]ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, [QE][QS]ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು [QE]
31. [QS]ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, [QE][QS]ನಾನೇ ಮಾತನಾಡುವೆನು. [QE]
32. [QS]ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, [QE][QS]ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. [QE]
33. [QS]ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, [QE][QS]ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” [QE]