1. {ಎಲೀಹು ಯೋಬನಿಗೆ ಸವಾಲೆಸೆದಿದ್ದು} [PS] ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು. [QBR]
2. ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ [QBR] ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ. [QBR]
3. ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, [QBR] ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. [QBR]
4. ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, [QBR] ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ. [QBR]
5. ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, [QBR] ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. [QBR]
6. ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. [QBR] ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ. [QBR]
7. ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, [QBR] ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. [QBR]
8. ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, [QBR] ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ, [QBR]
9. ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ. [QBR]
10. ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, [QBR] ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ. [QBR]
11. ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, [QBR] ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ. [QBR]
12. ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, [QBR] ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. [QBR]
13. [* ಅಥವಾ ಆತನು ತನ್ನ ಕಾರ್ಯಗಳ ಬಗ್ಗೆ ಉತ್ತರ ದಯಪಾಲಿಸುವುದಿಲ್ಲ.] ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, [QBR] ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ? [QBR]
14. ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, [QBR] ಮನುಷ್ಯನಾದರೋ ಲಕ್ಷಿಸುವುದಿಲ್ಲ. [QBR]
15. ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, [QBR] ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, [QBR]
16. ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು. [QBR]
17. ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, [QBR] ಮಾನವನಿಗೆ ಗರ್ವವನ್ನು ಮರೆಮಾಡುವನು. [QBR]
18. ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, [QBR] ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು. [QBR]
19. ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, [QBR] ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು. [QBR]
20. ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, [QBR] ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು. [QBR]
21. ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, [QBR] ಕಾಣದಿದ್ದ ಅವನ ಎಲುಬುಗಳು ಬಯಲಾಗುವವು. [QBR]
22. ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, [QBR] ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು. [QBR]
23. ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು [QBR] ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ, [QBR]
24. ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, [QBR] ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ, [QBR]
25. ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. [QBR] ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು. [QBR]
26. ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, [QBR] ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, [QBR] ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು. [QBR]
27. ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, [QBR] ಆತನು ಮುಯ್ಯಿತೀರಿಸಲಿಲ್ಲ. [QBR]
28. ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, [QBR] ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು. [QBR]
29. ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು. [QBR]
30. ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, [QBR] ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು [QBR]
31. ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, [QBR] ನಾನೇ ಮಾತನಾಡುವೆನು. [QBR]
32. ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, [QBR] ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. [QBR]
33. ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, [QBR] ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” [PE]