1. {ಎಲೀಹುವಿನ ಎರಡನೆಯ ಸಂಭಾಷಣೆ} [PS] ಆಗ ಎಲೀಹು ಮತ್ತೆ ಇಂತೆಂದನು, [QBR]
2. “ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, [QBR] ಜ್ಞಾನಿಗಳೇ, ನನಗೆ ಕಿವಿಗೊಡಿರಿ! [QBR]
3. ನಾಲಿಗೆಯು ಆಹಾರವನ್ನು ರುಚಿನೋಡುವಂತೆ, [QBR] ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. [QBR]
4. ನ್ಯಾಯವನ್ನೇ ಆರಿಸಿಕೊಳ್ಳೋಣ, [QBR] ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. [QBR]
5. ಯೋಬನು, ‘ನಾನು ನೀತಿವಂತನು, [QBR] ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ. [QBR]
6. ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. [QBR] ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ. [QBR]
7. ಯೋಬನಿಗೆ ಸಮಾನನು ಯಾರು? [QBR] ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ. [QBR]
8. ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, [QBR] ಕೆಟ್ಟವರ ಸಂಗಡ ನಡೆದಾಡುತ್ತಾನೆ. [QBR]
9. ‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, [QBR] ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ. [QBR]
10. ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, [QBR] ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, [QBR] ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! [QBR]
11. ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, [QBR] ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು. [QBR]
12. ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, [QBR] ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ. [QBR]
13. ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? [QBR] ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? [QBR]
14. ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, [QBR] ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ, [QBR]
15. ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, [QBR] ಪುನಃ ಮನುಷ್ಯರು ಧೂಳೇ ಆಗುವರು. [QBR]
16. ನಿನಗೆ ವಿವೇಕವಿದ್ದರೆ ಇದನ್ನು ಕೇಳು, [QBR] ನನ್ನ ಮಾತುಗಳ ಧ್ವನಿಗೆ ಕಿವಿಗೊಡು! [QBR]
17. ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? [QBR] ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ? [QBR]
18. ಆತನು ರಾಜನಿಗೆ, ‘ನೀನು ಮೂರ್ಖ’ [QBR] ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ? [QBR]
19. ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, [QBR] ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; [QBR] ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. [QBR]
20. ಕ್ಷಣ ಮಾತ್ರದೊಳಗೆ ಸಾಯುವರು; [QBR] ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, [QBR] ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. [QBR]
21. ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, [QBR] ಅವನ ಹೆಜ್ಜೆಗಳನ್ನೆಲ್ಲಾ ನೋಡುವನು. [QBR]
22. ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, [QBR] ಅನುಕೂಲವಾದ ಯಾವ ಕತ್ತಲೂ, [QBR] ಯಾವ ಗಾಢಾಂಧಕಾರವೂ ಇರುವುದಿಲ್ಲ. [QBR]
23. ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, [QBR] ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ. [QBR]
24. ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, [QBR] ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. [QBR]
25. ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, [QBR] ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು. [QBR]
26. ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು. [QBR]
27. ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ. [QBR]
28. ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, [QBR] ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು. [QBR]
29. ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? [QBR] ವಿಮುಖನಾದರೆ ಆತನ ದರ್ಶನ ಮಾಡುವವರಾರು? [QBR] ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ. [QBR]
30. ಭ್ರಷ್ಟನು ಆಳಬಾರದು, [QBR] ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ. [QBR]
31. ಮನುಷ್ಯನು ದೇವರನ್ನು ಕುರಿತು, [QBR] ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ, [QBR]
32. ನಾನು ಕಾಣದಿರುವುದನ್ನು ನೀನೇ ಸೂಚಿಸು; [QBR] ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ [QBR] ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ? [QBR]
33. ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? [QBR] ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? [QBR] ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. [QBR] ನಿನಗೆ ತಿಳಿದದ್ದನ್ನು ತಿಳಿಸು. [QBR]
34. ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ, [QBR]
35. ‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, [QBR] ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’ [QBR]
36. ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! [QBR] ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. [QBR]
37. ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; [QBR] ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, [QBR] ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು. [PE]