1. {#1ಎಲೀಹುವಿನ ಎರಡನೆಯ ಸಂಭಾಷಣೆ }
2. [PS]ಆಗ ಎಲೀಹು ಮತ್ತೆ ಇಂತೆಂದನು, [PE][QS]“ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, [QE][QS]ಜ್ಞಾನಿಗಳೇ, ನನಗೆ ಕಿವಿಗೊಡಿರಿ! [QE]
3. [QS]ನಾಲಿಗೆಯು ಆಹಾರವನ್ನು ರುಚಿನೋಡುವಂತೆ, [QE][QS]ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. [QE]
4. [QS]ನ್ಯಾಯವನ್ನೇ ಆರಿಸಿಕೊಳ್ಳೋಣ, [QE][QS]ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. [QE]
5. [QS]ಯೋಬನು, ‘ನಾನು ನೀತಿವಂತನು, [QE][QS]ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ. [QE]
6. [QS]ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. [QE][QS]ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ. [QE]
7. [QS]ಯೋಬನಿಗೆ ಸಮಾನನು ಯಾರು? [QE][QS]ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ. [QE]
8. [QS]ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, [QE][QS]ಕೆಟ್ಟವರ ಸಂಗಡ ನಡೆದಾಡುತ್ತಾನೆ. [QE]
9. [QS]‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, [QE][QS]ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ. [QE]
10. [QS]ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, [QE][QS]ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, [QE][QS]ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! [QE]
11. [QS]ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, [QE][QS]ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು. [QE]
12. [QS]ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, [QE][QS]ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ. [QE]
13. [QS]ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? [QE][QS]ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? [QE]
14. [QS]ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, [QE][QS]ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ, [QE]
15. [QS]ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, [QE][QS]ಪುನಃ ಮನುಷ್ಯರು ಧೂಳೇ ಆಗುವರು. [QE]
16. [QS]ನಿನಗೆ ವಿವೇಕವಿದ್ದರೆ ಇದನ್ನು ಕೇಳು, [QE][QS]ನನ್ನ ಮಾತುಗಳ ಧ್ವನಿಗೆ ಕಿವಿಗೊಡು! [QE]
17. [QS]ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? [QE][QS]ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ? [QE]
18. [QS]ಆತನು ರಾಜನಿಗೆ, ‘ನೀನು ಮೂರ್ಖ’ [QE][QS]ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ? [QE]
19. [QS]ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, [QE][QS]ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; [QE][QS]ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. [QE]
20. [QS]ಕ್ಷಣ ಮಾತ್ರದೊಳಗೆ ಸಾಯುವರು; [QE][QS]ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, [QE][QS]ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. [QE]
21. [QS]ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, [QE][QS]ಅವನ ಹೆಜ್ಜೆಗಳನ್ನೆಲ್ಲಾ ನೋಡುವನು. [QE]
22. [QS]ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, [QE][QS]ಅನುಕೂಲವಾದ ಯಾವ ಕತ್ತಲೂ, [QE][QS]ಯಾವ ಗಾಢಾಂಧಕಾರವೂ ಇರುವುದಿಲ್ಲ. [QE]
23. [QS]ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, [QE][QS]ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ. [QE]
24. [QS]ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, [QE][QS]ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. [QE]
25. [QS]ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, [QE][QS]ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು. [QE]
26. [QS]ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು. [QE]
27. [QS]ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ. [QE]
28. [QS]ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, [QE][QS]ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು. [QE]
29. [QS]ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? [QE][QS]ವಿಮುಖನಾದರೆ ಆತನ ದರ್ಶನ ಮಾಡುವವರಾರು? [QE][QS]ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ. [QE]
30. [QS]ಭ್ರಷ್ಟನು ಆಳಬಾರದು, [QE][QS]ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ. [QE]
31. [QS]ಮನುಷ್ಯನು ದೇವರನ್ನು ಕುರಿತು, [QE][QS]‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ, [QE]
32. [QS]ನಾನು ಕಾಣದಿರುವುದನ್ನು ನೀನೇ ಸೂಚಿಸು; [QE][QS]ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ [QE][QS]ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ? [QE]
33. [QS]ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? [QE][QS]ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? [QE][QS]ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. [QE][QS]ನಿನಗೆ ತಿಳಿದದ್ದನ್ನು ತಿಳಿಸು. [QE]
34. [QS]ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ, [QE]
35. [QS]‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, [QE][QS]ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’ [QE]
36. [QS]ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! [QE][QS]ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. [QE]
37. [QS]ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; [QE][QS]ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, [QE][QS]ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು. [QE]