1. {#1ಎಲೀಹುವಿನ ಮೂರನೆಯ ಸಂಭಾಷಣೆ }
2. [PS]ಆ ಮೇಲೆ ಎಲೀಹು ಮತ್ತೆ ಇಂತೆಂದನು, [PE][QS]“ನೀತಿಯಿಂದ ನನಗೇನು ಪ್ರಯೋಜನವಾಯಿತು? [QE][QS]ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು? [QE]
3. [QS]ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, [QE][QS]ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ? [QE]
4. [QS]ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು. [QE]
5. [QS]ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, [QE][QS]ಅವು ನಿನಗಿಂತ ಎಷ್ಟೋ ಎತ್ತರವಾಗಿವೆ! [QE]
6. [QS]ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? [QE][QS]ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು? [QE]
7. [QS]ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? [QE][QS]ನಿನ್ನ ಕೈಯಿಂದ ಆತನಿಗೆ ಲಾಭವೇನು? [QE]
8. [QS]ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, [QE][QS]ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು. [QE]
9. [QS]ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, [QE][QS]ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು. [QE]
10. [QS]‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? [QE][QS]ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ. [QE]
11. [QS]ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, [QE][QS]ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ. [QE]
12. [QS]ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, [QE][QS]ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ. [QE]
13. [QS]ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ. [QE]
14. [QS]ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, [QE][QS]ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ? [QE]
15. [QS]ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, [QE][QS]ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು, [QE]
16. [QS]ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, [QE][QS]ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.” [QE]