1. {ಎಲೀಹುವಿನ ಮೂರನೆಯ ಸಂಭಾಷಣೆ} [PS] ಆ ಮೇಲೆ ಎಲೀಹು ಮತ್ತೆ ಇಂತೆಂದನು, [QBR]
2. “ನೀತಿಯಿಂದ ನನಗೇನು ಪ್ರಯೋಜನವಾಯಿತು? [QBR] ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು? [QBR]
3. ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, [QBR] ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ? [QBR]
4. ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು. [QBR]
5. ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, [QBR] ಅವು ನಿನಗಿಂತ ಎಷ್ಟೋ ಎತ್ತರವಾಗಿವೆ! [QBR]
6. ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? [QBR] ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು? [QBR]
7. ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? [QBR] ನಿನ್ನ ಕೈಯಿಂದ ಆತನಿಗೆ ಲಾಭವೇನು? [QBR]
8. ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, [QBR] ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು. [QBR]
9. ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, [QBR] ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು. [QBR]
10. ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? [QBR] ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ. [QBR]
11. ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, [QBR] ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ. [QBR]
12. ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, [QBR] ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ. [QBR]
13. ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ. [QBR]
14. ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, [QBR] ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ? [QBR]
15. ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, [QBR] ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು, [QBR]
16. ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, [QBR] ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.” [PE]