1. {#1ಎಲೀಹುವಿನ ಅಂತಿಮ ಸಂಭಾಷಣೆ }
2. [PS]ಆಮೇಲೆ ಎಲೀಹು ಮತ್ತೆ ಹೀಗೆಂದನು, [PE][QS]“ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, [QE][QS]ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು. [QE]
3. [QS]ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, [QE][QS]ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. [QE]
4. [QS]ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, [QE][QS]ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. [QE]
5. [QS]ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, [QE][QS]ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ. [QE]
6. [QS]ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. [QE]
7. [QS]ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, [QE][QS]ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, [QE][QS]ಉನ್ನತಪದವಿಗೆ ಅವರನ್ನು ತರುವನು. [QE]
8. [QS]ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, [QE][QS]ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ, [QE]
9. [QS]ಆತನು ಅವರ ದುಷ್ಕೃತ್ಯವನ್ನೂ, [QE][QS]ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು. [QE]
10. [QS]ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, [QE][QS]ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. [QE]
11. [QS]ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, [QE][QS]ತಮ್ಮ ದಿನಗಳನ್ನು ಸುಖದಲ್ಲಿಯೂ, [QE][QS]ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು. [QE]
12. [QS]ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, [QE][QS]ಜ್ಞಾನಹೀನರಾಗಿಯೇ ಪ್ರಾಣಬಿಡುವರು. [QE]
13. [QS] [* ಅಥವಾ ಕಪಟ ಹೃದಯಿಗಳು. ]ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, [QE][QS]ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ. [QE]
14. [QS]ಯೌವನದಲ್ಲೇ ಸಾಯುವರು. [QE][QS]ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು. [QE]
15. [QS]ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, [QE][QS]ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. [QE]
16. [QS]ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, [QE][QS]ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, [QE][QS]ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ. [QE]
17. [QS]ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, [QE][QS]ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. [QE]
18. [QS]ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! [QE][QS]ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ! [QE]
19. [QS]ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, [QE][QS]ಧನಸಾಮರ್ಥ್ಯವೂ ನಿನಗೆ ಈಡಾಗುವುದೇ? [QE]
20. [QS]ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, [QE][QS]ರಾತ್ರಿಯನ್ನು ಬಯಸಬೇಡ. [QE]
21. [QS]ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. [QE][QS]ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ. [QE]
22. [QS]ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, [QE][QS]ಆತನಂತಹ ಉಪದೇಶಕನು ಯಾರು? [QE]
23. [QS]ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? [QE][QS]‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು? [QE]
24. [QS]ಮನುಷ್ಯರು ಕೀರ್ತಿಸುವ, [QE][QS]ಆತನ ಕೆಲಸವನ್ನು ಹೊಗಳಲು ಮರೆಯಬೇಡ. [QE]
25. [QS]ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; [QE][QS]ಆದರೆ ನರನು ದೂರದಿಂದ ನೋಡುತ್ತಾನಷ್ಟೆ. [QE]
26. [QS]ಆಹಾ, ದೇವರು ಮಹೋನ್ನತನಾಗಿದ್ದಾನೆ, [QE][QS]ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ. [QE]
27. [QS]ನೀರಿನ ಹನಿಗಳನ್ನು ಎಳೆದುಕೊಳ್ಳುವನು, [QE][QS]ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು. [QE]
28. [QS]ಮೋಡಗಳು ಅದನ್ನು ಸುರಿಸಿ [QE][QS]ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು. [QE]
29. [QS]ಆಹಾ, ಮೇಘಗಳ ಹರಡುವಿಕೆಯನ್ನೂ, [QE][QS]ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು? [QE]
30. [QS]ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, [QE][QS]ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು. [QE]
31. [QS]ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, [QE][QS]ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ. [QE]
32. [QS]ಕೈತುಂಬಾ ಸಿಡಿಲನ್ನು ಹಿಡಿದು [QE][QS]ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು. [QE]
33. [QS]ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, [QE][QS]ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.” [QE]