1. {#1ಎಲೀಹುವಿನ ಅಂತಿಮ ಸಂಭಾಷಣೆಯ ಮುಂದುವರಿಕೆ } [QS]“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, [QE][QS]ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು. [QE]
2. [QS]ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, [QE][QS]ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! [QE]
3. [QS]ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, [QE][QS]ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು. [QE]
4. [QS]ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, [QE][QS]ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. [QE][QS]ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ. [QE]
5. [QS]ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; [QE][QS]ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು. [QE]
6. [QS]ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, [QE][QS]ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು. [QE]
7. [QS]ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, [QE][QS]ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ. [QE]
8. [QS]ಆಗ ಮೃಗಗಳು ಗುಹೆಗಳನ್ನು ಸೇರಿ, [QE][QS]ತಮ್ಮ ಗುಹೆಗಳಲ್ಲಿ ವಾಸಿಸುವವು. [QE]
9. [QS]ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, [QE][QS]ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು. [QE]
10. [QS]ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, [QE][QS]ವಿಶಾಲವಾದ ನೀರು ಗಟ್ಟಿಯಾಗುವುದು. [QE]
11. [QS]ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, [QE][QS]ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು. [QE]
12. [QS]ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, [QE][QS]ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು. [QE]
13. [QS]ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ [QE][QS]ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು. [QE]
14. [QS]ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು. [QE]
15. [QS]ದೇವರು ಇವುಗಳನ್ನು ನಿಯಂತ್ರಿಸಿ, [QE][QS]ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ? [QE]
16. [QS]ಮೋಡಗಳ ತೂಗಾಟವನ್ನೂ, [QE][QS]ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ? [QE]
17. [QS]ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, [QE][QS]ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ? [QE]
18. [QS]ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ [QE][QS]ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ? [QE]
19. [QS]ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, [QE][QS]ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ. [QE]
20. [QS]ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? [QE][QS]ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ. [QE]
21. [QS]ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, [QE][QS]ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು. [QE]
22. [QS]ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, [QE][QS]ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ. [QE]
23. [QS]ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; [QE][QS]ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, [QE][QS]ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ. [QE]
24. [QS]ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, [QE][QS]ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.” [QE]