1. {ಎಲೀಹುವಿನ ಅಂತಿಮ ಸಂಭಾಷಣೆಯ ಮುಂದುವರಿಕೆ} [PS] “ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, [QBR] ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು. [QBR]
2. ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, [QBR] ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! [QBR]
3. ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, [QBR] ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು. [QBR]
4. ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, [QBR] ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. [QBR] ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ. [QBR]
5. ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; [QBR] ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು. [QBR]
6. ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, [QBR] ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು. [QBR]
7. ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, [QBR] ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ. [QBR]
8. ಆಗ ಮೃಗಗಳು ಗುಹೆಗಳನ್ನು ಸೇರಿ, [QBR] ತಮ್ಮ ಗುಹೆಗಳಲ್ಲಿ ವಾಸಿಸುವವು. [QBR]
9. ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, [QBR] ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು. [QBR]
10. ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, [QBR] ವಿಶಾಲವಾದ ನೀರು ಗಟ್ಟಿಯಾಗುವುದು. [QBR]
11. ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, [QBR] ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು. [QBR]
12. ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, [QBR] ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು. [QBR]
13. ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ [QBR] ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು. [QBR]
14. ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು. [QBR]
15. ದೇವರು ಇವುಗಳನ್ನು ನಿಯಂತ್ರಿಸಿ, [QBR] ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ? [QBR]
16. ಮೋಡಗಳ ತೂಗಾಟವನ್ನೂ, [QBR] ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ? [QBR]
17. ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, [QBR] ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ? [QBR]
18. ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ [QBR] ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ? [QBR]
19. ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, [QBR] ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ. [QBR]
20. ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? [QBR] ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ. [QBR]
21. ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, [QBR] ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು. [QBR]
22. ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, [QBR] ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ. [QBR]
23. ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; [QBR] ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, [QBR] ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ. [QBR]
24. ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, [QBR] ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.” [PE]