1. {ಯೆಹೋವನು ಯೋಬನಿಗೆ ಸವಾಲೆಸೆದಿದ್ದು} [PS] ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, [QBR]
2. “ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು [QBR] ಮಂಕುಮಾಡುವ ಇವನು ಯಾರು? [QBR]
3. ಶೂರನಂತೆ ನಡುಕಟ್ಟಿಕೋ; [QBR] ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. [QBR]
4. ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? [QBR] ನೀನು ಜ್ಞಾನಿಯಾಗಿದ್ದರೆ ಹೇಳು. [QBR]
5. ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. [QBR] ಅದರ ಮೇಲೆ ನೂಲುಹಿಡಿದವರು ಯಾರು? [QBR]
6. ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? [QBR] ಅದರ ಮೂಲೆಗಲ್ಲನ್ನು ಹಾಕಿದವರು ಯಾರು? [QBR]
7. ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ [QBR] ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು, [QBR]
8. ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, [QBR] ಅದರ ದ್ವಾರಗಳನ್ನು ಮುಚ್ಚಿದವರು ಯಾರು? [QBR]
9. ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, [QBR] ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ? [QBR]
10. ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, [QBR] ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು [QBR]
11. ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, [QBR] ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು. [QBR]
12. ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? [QBR] ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ? [QBR]
13. ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ? [QBR]
14. ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. [QBR] ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು. [QBR]
15. ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, [QBR] ಎತ್ತಿದ ಕೈ ಮುರಿಯುವುದು. [QBR]
16. ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? [QBR] ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ? [QBR]
17. ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? [QBR] ಘೋರಾಂಧಕಾರದ ಕದಗಳನ್ನು ಕಂಡೆಯಾ? [QBR]
18. ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು. [QBR]
19. ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ? [QBR]
20. ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, [QBR] ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? [QBR]
21. ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; [QBR] ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! [QBR]
22. ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, [QBR] ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ, [QBR]
23. ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? [QBR] ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ? [QBR]
24. ಬೆಳಕನ್ನು ಭಾಗಿಸುವುದಕ್ಕೆ, [QBR] ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ? [QBR]
25. ನಿರ್ಜನ ಪ್ರದೇಶದಲ್ಲಿಯೂ, [QBR] ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ, [QBR]
26. ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, [QBR] ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು, [QBR]
27. ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, [QBR] ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು? [QBR]
28. ಮಳೆಗೆ ತಂದೆಯುಂಟೋ? [QBR] ಮಂಜಿನ ಹನಿಗಳನ್ನು ಪಡೆದವನು ಯಾರು? [QBR]
29. ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? [QBR] ಆಕಾಶದ ಇಬ್ಬನಿಯನ್ನು ಯಾರು ಹೆತ್ತರು? [QBR]
30. ನೀರು ಕಲ್ಲಿನಂತೆ ಗಟ್ಟಿಯಾಗುವುದು; [QBR] ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು. [QBR]
31. ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, [QBR] ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ? [QBR]
32. ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? [QBR] ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ? [QBR]
33. ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? [QBR] ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ? [QBR]
34. ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, [QBR] ಹೇರಳವಾದ ನೀರು ನಿನ್ನನ್ನು ಆವರಿಸುವುದೋ? [QBR]
35. ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, [QBR] ‘ಇಗೋ, ಬಂದಿದ್ದೇವೆ’ ಎನ್ನುವವೋ? [QBR]
36. ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? [QBR] ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು? [QBR]
37. ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? [QBR] ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ, [QBR]
38. ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, [QBR] ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು? [QBR]
39. ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? [QBR]
40. ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, [QBR] ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ? [QBR]
41. ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, [QBR] ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?” [PE]