1. {#1ಯೆಹೋವನು ಯೋಬನಿಗೆ ಸವಾಲೆಸೆದಿದ್ದು }
2. [PS]ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, [PE][QS]“ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು [QE][QS]ಮಂಕುಮಾಡುವ ಇವನು ಯಾರು? [QE]
3. [QS]ಶೂರನಂತೆ ನಡುಕಟ್ಟಿಕೋ; [QE][QS]ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. [QE]
4. [QS]ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? [QE][QS]ನೀನು ಜ್ಞಾನಿಯಾಗಿದ್ದರೆ ಹೇಳು. [QE]
5. [QS]ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. [QE][QS]ಅದರ ಮೇಲೆ ನೂಲುಹಿಡಿದವರು ಯಾರು? [QE]
6. [QS]ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? [QE][QS]ಅದರ ಮೂಲೆಗಲ್ಲನ್ನು ಹಾಕಿದವರು ಯಾರು? [QE]
7. [QS]ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ [QE][QS]ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು, [QE]
8. [QS]ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, [QE][QS]ಅದರ ದ್ವಾರಗಳನ್ನು ಮುಚ್ಚಿದವರು ಯಾರು? [QE]
9. [QS]ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, [QE][QS]ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ? [QE]
10. [QS]ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, [QE][QS]ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು [QE]
11. [QS]‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, [QE][QS]ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು. [QE]
12. [QS]ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? [QE][QS]ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ? [QE]
13. [QS]ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ? [QE]
14. [QS]ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. [QE][QS]ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು. [QE]
15. [QS]ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, [QE][QS]ಎತ್ತಿದ ಕೈ ಮುರಿಯುವುದು. [QE]
16. [QS]ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? [QE][QS]ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ? [QE]
17. [QS]ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? [QE][QS]ಘೋರಾಂಧಕಾರದ ಕದಗಳನ್ನು ಕಂಡೆಯಾ? [QE]
18. [QS]ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು. [QE]
19. [QS]ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ? [QE]
20. [QS]ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, [QE][QS]ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? [QE]
21. [QS]ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; [QE][QS]ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! [QE]
22. [QS]ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, [QE][QS]ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ, [QE]
23. [QS]ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? [QE][QS]ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ? [QE]
24. [QS]ಬೆಳಕನ್ನು ಭಾಗಿಸುವುದಕ್ಕೆ, [QE][QS]ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ? [QE]
25. [QS]ನಿರ್ಜನ ಪ್ರದೇಶದಲ್ಲಿಯೂ, [QE][QS]ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ, [QE]
26. [QS]ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, [QE][QS]ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು, [QE]
27. [QS]ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, [QE][QS]ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು? [QE]
28. [QS]ಮಳೆಗೆ ತಂದೆಯುಂಟೋ? [QE][QS]ಮಂಜಿನ ಹನಿಗಳನ್ನು ಪಡೆದವನು ಯಾರು? [QE]
29. [QS]ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? [QE][QS]ಆಕಾಶದ ಇಬ್ಬನಿಯನ್ನು ಯಾರು ಹೆತ್ತರು? [QE]
30. [QS]ನೀರು ಕಲ್ಲಿನಂತೆ ಗಟ್ಟಿಯಾಗುವುದು; [QE][QS]ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು. [QE]
31. [QS]ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, [QE][QS]ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ? [QE]
32. [QS]ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? [QE][QS]ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ? [QE]
33. [QS]ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? [QE][QS]ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ? [QE]
34. [QS]ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, [QE][QS]ಹೇರಳವಾದ ನೀರು ನಿನ್ನನ್ನು ಆವರಿಸುವುದೋ? [QE]
35. [QS]ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, [QE][QS]‘ಇಗೋ, ಬಂದಿದ್ದೇವೆ’ ಎನ್ನುವವೋ? [QE]
36. [QS]ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? [QE][QS]ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು? [QE]
37. [QS]ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? [QE][QS]ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ, [QE]
38. [QS]ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, [QE][QS]ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು? [QE]
39. [QS]ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? [QE]
40. [QS]ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, [QE][QS]ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ? [QE]
41. [QS]ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, [QE][QS]ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?” [QE]