1. {#1ಯೆಹೋವನ ಸವಾಲಿನ ಮುಂದುವರಿಕೆ } [QS]ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? [QE][QS]ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? [QE]
2. [QS]ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? [QE][QS]ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? [QE]
3. [QS]ಅವು ಮರಿಗಳನ್ನು ಹಾಕಿದೊಡನೆಯೇ [QE][QS]ತಮ್ಮ ವೇದನೆಯನ್ನೂ ತೊರೆದುಬಿಡುವವು. [QE]
4. [QS]ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು [QE][QS]ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ. [QE]
5. [QS]ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? [QE][QS]ಅದರ ಕಟ್ಟನ್ನು ಬಿಚ್ಚಿದವರು ಯಾರು? [QE]
6. [QS]ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, [QE][QS]ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ. [QE]
7. [QS]ಅದು ಊರುಗದ್ದಲವನ್ನು ಧಿಕ್ಕರಿಸಿ, [QE][QS]ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. [QE]
8. [QS]ಅದರ ಕಾವಲು ವಿಶಾಲವಾದ ಬೆಟ್ಟಗಳೇ. [QE][QS]ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು. [QE]
9. [QS]ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, [QE][QS]ನಿನ್ನ ಗೋದಲಿಯ ಹತ್ತಿರ ತಂಗುವುದೋ? [QE]
10. [QS]ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? [QE][QS]ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? [QE]
11. [QS]ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, [QE][QS]ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ? [QE]
12. [QS]ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, [QE][QS]ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ? [QE]
13. [QS]ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, [QE][QS]ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? [QE]
14. [QS]ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, [QE][QS]ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. [QE]
15. [QS]ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. [QE]
16. [QS]ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, [QE][QS]ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. [QE]
17. [QS]ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, [QE][QS]ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ! [QE]
18. [QS]ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, [QE][QS]ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು. [QE]
19. [QS]ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, [QE][QS]ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ? [QE]
20. [QS]ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? [QE][QS]ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. [QE]
21. [QS]ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, [QE][QS]ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು. [QE]
22. [QS]ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ [QE][QS]ಭಯವನ್ನು ತಾತ್ಸಾರ ಮಾಡುವುದು. [QE]
23. [QS]ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, [QE][QS]ಈಟಿಯೂ ಅದರ ಮೇಲೆ ಜಣಜಣಿಸುವವು. [QE]
24. [QS]ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, [QE][QS]ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. [QE]
25. [QS]ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು [QE][QS]ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, [QE][QS]ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. [QE]
26. [QS]ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, [QE][QS]ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ? [QE]
27. [QS]ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ [QE][QS]ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? [QE]
28. [QS]ಅದಕ್ಕೆ ಬಂಡೆಯೇ ನಿವಾಸವು; [QE][QS]ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. [QE]
29. [QS]ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; [QE][QS]ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು. [QE]
30. [QS]ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು; [QE]