1. {ಯೆಹೋವನ ಸವಾಲಿನ ಮುಂದುವರಿಕೆ} [PS] ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? [QBR] ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? [QBR]
2. ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? [QBR] ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? [QBR]
3. ಅವು ಮರಿಗಳನ್ನು ಹಾಕಿದೊಡನೆಯೇ [QBR] ತಮ್ಮ ವೇದನೆಯನ್ನೂ ತೊರೆದುಬಿಡುವವು. [QBR]
4. ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು [QBR] ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ. [QBR]
5. ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? [QBR] ಅದರ ಕಟ್ಟನ್ನು ಬಿಚ್ಚಿದವರು ಯಾರು? [QBR]
6. ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, [QBR] ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ. [QBR]
7. ಅದು ಊರುಗದ್ದಲವನ್ನು ಧಿಕ್ಕರಿಸಿ, [QBR] ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. [QBR]
8. ಅದರ ಕಾವಲು ವಿಶಾಲವಾದ ಬೆಟ್ಟಗಳೇ. [QBR] ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು. [QBR]
9. ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, [QBR] ನಿನ್ನ ಗೋದಲಿಯ ಹತ್ತಿರ ತಂಗುವುದೋ? [QBR]
10. ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? [QBR] ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? [QBR]
11. ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, [QBR] ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ? [QBR]
12. ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, [QBR] ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ? [QBR]
13. ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, [QBR] ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? [QBR]
14. ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, [QBR] ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. [QBR]
15. ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. [QBR]
16. ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, [QBR] ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. [QBR]
17. ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, [QBR] ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ! [QBR]
18. ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, [QBR] ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು. [QBR]
19. ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, [QBR] ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ? [QBR]
20. ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? [QBR] ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. [QBR]
21. ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, [QBR] ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು. [QBR]
22. ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ [QBR] ಭಯವನ್ನು ತಾತ್ಸಾರ ಮಾಡುವುದು. [QBR]
23. ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, [QBR] ಈಟಿಯೂ ಅದರ ಮೇಲೆ ಜಣಜಣಿಸುವವು. [QBR]
24. ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, [QBR] ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. [QBR]
25. ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು [QBR] ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, [QBR] ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. [QBR]
26. ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, [QBR] ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ? [QBR]
27. ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ [QBR] ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? [QBR]
28. ಅದಕ್ಕೆ ಬಂಡೆಯೇ ನಿವಾಸವು; [QBR] ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. [QBR]
29. ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; [QBR] ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು. [QBR]
30. ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು; [PE]