1. {#1ಎಲೀಫಜನ ಪ್ರತ್ಯುತ್ತರ }
2. [PS]ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು, [PE][QS]“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? [QE][QS]ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು? [QE]
3. [QS]ಇಗೋ, ನೀನು ಅನೇಕರನ್ನು ಶಿಕ್ಷಿಸಿ, [QE][QS]ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ. [QE]
4. [QS]ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, [QE][QS]ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ. [QE]
5. [QS]ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. [QE][QS]ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ. [QE]
6. [QS]ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, [QE][QS]ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ? [QE]
7. [QS]ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? [QE][QS]ಯಥಾರ್ಥರು ಅಳಿದು ಹೋದದ್ದೆಲ್ಲಿ? [QE]
8. [QS]ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, [QE][QS]ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು. [QE]
9. [QS]ದೇವರ ಶ್ವಾಸದಿಂದ ನಾಶವಾಗುತ್ತಾರೆ. [QE][QS]ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ. [QE]
10. [QS]ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, [QE][QS]ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು. [QE]
11. [QS]ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. [QE][QS]ಸಿಂಹದ ಮರಿಗಳು ಚದರಿಹೋಗುವವು. [QE]
12. [QS]ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. [QE][QS]ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. [QE]
13. [QS]ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, [QE][QS]ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ [QE]
14. [QS]ನನಗೆ ಎಲುಬುಗಳೆಲ್ಲಾ ನಡುಗುವಷ್ಟು, [QE][QS]ಭಯಂಕರವಾದ ದಿಗಿಲು ಉಂಟಾಯಿತು. [QE]
15. [QS]ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, [QE][QS]ಮೈಯೆಲ್ಲಾ ರೋಮಾಂಚನವಾಯಿತು. [QE]
16. [QS]ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, [QE][QS]ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. [QE][QS]ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.” [QE]
17. [QS]ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? [QE][QS]ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ? [QE]
18. [QS]ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, [QE][QS]ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ. [QE]
19. [QS]ಧೂಳಿನಲ್ಲಿರುವ ಅಸ್ತಿವಾರದ ಮೇಲೆ, [QE][QS]ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. [QE][QS]ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. [QE]
20. [QS]ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. [QE][QS]ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. [QE]
21. [QS]ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ. [QE]